ರಾಜಸ್ಥಾನದಲ್ಲಿ ಓಮಿಕ್ರಾನ್‌ನಿಂದ ಚೇತರಿಸಿಕೊಂಡಿದ್ದ ವ್ಯಕ್ತಿ ಸಾವು

ಜೈಪುರ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕಿಗೆ ಒಳಗಾಗಿ ಚೇತರಿಸಿಕೊಂಡಿದ್ದ 73 ವರ್ಷದ ವ್ಯಕ್ತಿಯೊಬ್ಬರು ಶುಕ್ರವಾರ ಉದಯಪುರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಡಿಸೆಂಬರ್ 15 ರಂದು ಈ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಬಂದಿತ್ತು ಮತ್ತು ಜ್ವರ, ಕೆಮ್ಮು ಹಾಗೂ ಮೂಗು ಸೋರುವಿಕೆಯಂತಹ ರೋಗಲಕ್ಷಣಗಳನ್ನು ಹೊಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಡಾ ಖಾರಾಡಿ ಹೇಳಿದ್ದಾರೆ.

ಮೃತ ವ್ಯಕ್ತಿ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಮತ್ತು ಹೈಪೋಥೈರಾಯ್ಡಿಸಮ್ ಅನ್ನು ಹೊಂದಿದ್ದರು. ಈ ಸ್ಥಿತಿಯಲ್ಲಿ ವೈರಸ್ ದೇಹದ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ. ಅಲ್ಲದೆ ಮಧುಮೇಹ ಹೊಂದಿರುವ ರೋಗಿ ಹೆಚ್ಚಿನ ಪ್ರಮಾಣದಲ್ಲಿ ಅಪಾಯ ಇರುತ್ತದೆ ಎಂದು ಡಾ.ದಿನೇಶ್ ಖಾರಾಡಿ ಅವರು ತಿಳಿಸಿದ್ದಾರೆ.

ಡಿಸೆಂಬರ್ 21 ಮತ್ತು 25 ರಂದು ಈ ವ್ಯಕ್ತಿಗೆ ಎರಡು ಬಾರಿ ಕೊರೋನಾ ನೆಗೆಟಿವ್ ಬಂದಿತ್ತು. ಆದರೆ ಅವರು ಕೋವಿಡ್ ನಂತರ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ ಎಂದು ಉದಯಪುರ CMHO ಡಾ ದಿನೇಶ್ ಖರಾಡಿ ಅವರು ಹೇಳಿದ್ದಾರೆ.​

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page