Breaking News

ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಛಾಯಾಗ್ರಾಹಕ ಸಾವು

ಧಾರವಾಡ: ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಧಾರವಾಡದ ಛಾಯಾಗ್ರಾಹಕರೊಬ್ಬರು ಅಸುನೀಗಿರುವ ಘಟನೆ ನುಗ್ಗಿಕೇರಿ ಬಳಿ ಸಂಭವಿಸಿದೆ.

ಧಾರವಾಡದ ಅಮಿತ್ ಸಿಂಗ್ ಎಂಬುವವರೇ ಈ ಅಪಘಾತದಲ್ಲಿ ಸಾವನ್ನಪ್ಪಿದವರು. ಎರಡು ಬೈಕ್‌ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಂಭೀರವಾಗಿ ಗಾಯಗೊಂಡ ಅಮಿತ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನೊಬ್ಬರು ಗಾಯಗೊಂಡಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *