Breaking News

ಪೆಟ್ರೋಲ್ ಬಂಕ್‌ದಲ್ಲಿ ತಲ್ವಾರದಿಂದ ಸರ್ದಾರನ ಮೇಲೆ ಹಲ್ಲೆ! ಕಿಮ್ಸ್ ಆಸ್ಪತ್ರೆಗೆ ದಾಖಲು

ಹುಬ್ಬಳ್ಳಿ: ಪೆಟ್ರೋಲ್ ಬಂಕ್ ನಲ್ಲಿ ಲಾರಿಯ ಚಾಲಕನೋರ್ವನಿಗೆ ತಲ್ವಾರ ಹಾಗೂ ರಾಡಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ, ತಾಲೂಕಿನ ಅಂಚಟಗೇರಿ ನಡೆದಿದೆ.

ಅಂಚಟಗೇರಿಯ ಪರಶುರಾಮ ಪೆಟ್ರೋಲ್ ಬಂಕ್ ಸಮೀಪದಲ್ಲಿಯೇ ದುರ್ಘಟನೆ ನಡೆದಿದೆ. ಸುನೀಲ ಚೆಲವರಂ ಎಂಬ ಸರ್ದಾರಜಿಗೆ ಹೊಡೆಯಲಾಗಿದೆ. ಯಾವ ಕಾರಣಕ್ಕೆ ಹೀಗೆ ಮಾಡಲಾಗಿದೆ ಎಂಬುದು ಇನ್ನು ತಿಳಿದು ಬಂದಿಲ್ಲ.

ಕೆಲವರ ಪ್ರಕಾರ ಸರ್ದಾರಜಿಯನ್ನ ಹೊಡೆದು ಹಣವನ್ನ ದೋಚಿಕೊಂಡು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಅತೀವ ರಕ್ತಸ್ರಾವದಿಂದ ಬಳಲುತ್ತಿದ್ದ ಗಾಯಾಳುವನ್ನ ಹುಬ್ಬಳ್ಳಿಯ ಕಿಮ್ಸಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ. ಕಿಮ್ಸನ ತುರ್ತು ಚಿಕಿತ್ಸಾ ಘಟಕದಲ್ಲಿಟ್ಟು ಗಾಯಾಳುವಿಗೆ ಚಿಕಿತ್ಸೆ ನೀಡಲಾದೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮಾಹಿತಿ ಕಲೆ ಹಾಕಬೇಕಿದೆ.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *