ಬೆಂಗಳೂರು: ಇಲ್ಲಿಯ ಗೋವಿಂದರಾಜನಗರದ ಮೂಡಲಪಾಳ್ಯದಲ್ಲಿ ಬಿಬಿಎಂಪಿ ಪ್ರೌಢಶಾಲೆಯಲ್ಲಿ
ಹಮ್ಮಿಕೊಳ್ಳಲಾಗಿದ್ದ 15-18ನೇ ವಯೋಮಾನದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಅಭಿಯಾನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಇಂದು ಚಾಲನೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಮಕ್ಕಳನ್ನು ನೋಡಿ ಸಂತೋಷವಾಯಿತು. ಬೆಂಗಳೂರಿನ ಪ್ರದೇಶದಲ್ಲಿ ಇಂತಹ ವ್ಯವಸ್ಥಿತ ಶಾಲೆ ಇದೆ ಎನ್ನುವುದನ್ನು ಸೋಮಣ್ಣ ತೋರಿಸಿದ್ದಾರೆ. ಈ ಲಸಿಕೆ ಕಾರ್ಯಕ್ರಮ ಹೊಸ ವರ್ಷದಲ್ಲಿ ನಡೆಯುತ್ತಿದೆ. ಹೊಸವರ್ಷದಂದು ಹೊಸ ಅಭಿಯಾನ ನಡೆಯುತ್ತಿದೆ. ಮೋದಿಜಿಯವರ ದೂರದೃಷ್ಟಿಯ ಪರಿಣಾಮದಿಂದ ಈ ಕಾರ್ಯಕ್ರಮ ನಡೆಯುತ್ತಿದೆ ಎಂದರು.
ವಸತಿ ಸಚಿವ ಸೋಮಣ್ಣ ಮಾತನಾಡಿದರು. ಕಾರ್ಯಕ್ರಮದಲ್ಲಿ ಡಾ.ಅಶ್ವಥ ನಾರಾಯಣ, ಆರೋಗ್ಯ ಸಚಿವ ಕೆ ಸುಧಾಕರ್, ಬೈರತಿ ಬಸವರಾಜು, ಬಿಬಿಎಂಪಿ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

