ಖಾಕಿಪಡೆ ಒತ್ತಡ ನಿವಾರಿಸಲು ಕ್ರೀಡಾಕೂಟ ಸಹಕಾರಿ

ಧಾರವಾಡ: ಪೊಲೀಸರು ತಮ್ಮ ಒತ್ತಡಗಳನ್ನು ನಿರ್ವಹಿಸಲು ಕ್ರೀಡಾಕೂಟ ಸಹಕಾರಿಯಾಗಿದೆ.
ಕಳೆದ ಎರಡು ವರ್ಷಗಳಿಂದ ಇಡೀ ಮಾನವ ಕುಲ ಕೊರೊನಾ ವೈರಾಣುವಿನಿಂದ ತತ್ತರಿಸಿ ಹೋಗಿದೆ.
ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕ್ರೀಡೆ, ದೈಹಿಕ ಚಟುವಟಿಕೆಗಳು ಅಗತ್ಯ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು.

ಧಾರವಾಡದ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಪಾರಿವಾಳ ಹಾಗೂ ಬಲೂನುಗಳನ್ನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ ಅವರು ಕ್ರೀಡಾಕೂಟ ಉದ್ಘಾಟನೆಯನ್ನು ಘೋಷಿಸಿದರು. ಆಕರ್ಷಕ ಪಥಸಂಚಲನ ಜರುಗಿತು. ಭದ್ರಾ, ತುಂಗಾ, ವರದಾ, ಕೃಷ್ಣಾ ಹಾಗೂ ಕಾವೇರಿ ತಂಡಗಳಲ್ಲಿ 250 ಕ್ಕಿಂತ ಹೆಚ್ಚು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.

ನಾಳೆ ಜ.04 ರಂದು ಸಂಜೆ 4.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಬೆಳಗಾವಿ ಉತ್ತರ ವಲಯ ಪೊಲೀಸ್ ಮಹಾನಿರೀಕ್ಷಕ ಸತೀಶಕುಮಾರ್ ಬಹುಮಾನ ವಿತರಣೆ ಮಾಡಲಿದ್ದಾರೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page