ಉಡುಪಿ: ಕೇಂದ್ರ ಸರಕಾರ ಆಹಾರ ಸುರಕ್ಷೆ ಮತ್ತು ಗುಣಮಟ್ಟ ಪ್ರಾಧಿಕಾರದ ವತಿಯಿಂದ ಧಾರ್ಮಿಕ ಕೇಂದ್ರ ಗಳಲ್ಲಿ ದೊರೆಯುವ ಪ್ರಸಾದದ ಗುಣಮಟ್ಟ ಪರಿಶೀಲನೆಗೆ “ಭೋಗ್’ ಕಾರ್ಯಕ್ರಮ ಅನು ಷ್ಠಾನಗೊಳಿಸಿದ್ದು, ಕರಾವಳಿಯ 4 ದೇವಸ್ಥಾನಗಳಲ್ಲಿ ಶೀಘ್ರವೇ ಕಾರ್ಯರೂಪಕ್ಕೆ ಬರಲಿದೆ.
ಈ ಮೂಲಕ ಭಕ್ತರಿಗೆ ಉತ್ತಮ ಗುಣಮಟ್ಟ ಖಾತರಿಪಡಿಸಿದ ಪ್ರಸಾದವನ್ನು ನೀಡುವ ಉದ್ದೇಶವನ್ನು ಸರಕಾರ ಹೊಂದಿದೆ. ಪ್ರಾರಂಭಿಕ ಹಂತದಲ್ಲಿ ಕರಾವಳಿಯ ನಾಲ್ಕು ದೇವಸ್ಥಾನಗಳನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆಯನ್ನು ಹೆಚ್ಚಿಸುವ ನಿರೀಕ್ಷೆ ಹೊಂದಲಾಗಿದೆ. ಪ್ರಸಾದಗಳಲ್ಲಿ ಯಾವ ಉತ್ಪನ್ನಗಳನ್ನು ಎಷ್ಟು ಪ್ರಮಾಣದಲ್ಲಿ ಬಳಕೆ ಮಾಡಬೇಕು. ಅದರ ಶೇಖರಣೆ ಹೇಗೆ? ಯಾವ ವಸ್ತುಗಳನ್ನು ಬಳಸಬಾರದು ಎಂಬ ಅಂಶಗಳನ್ನು ಇದರ ಸದಸ್ಯರು ಗಮನಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

