Breaking News

ಜಲ ಸಂಪನ್ಮೂಲ ಸಚಿವಗೆ ಸವಾಲು ಹಾಕಿದ ಮಾಜಿ ಸಿಎಂ

ಚಾಮರಾಜನಗರ: ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರು’ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಪಕ್ಷದ ನಿಲುವಿನ ಬಗ್ಗೆ ದಾಖಲೆಗಳಿದ್ದರೆ  ಬಿಡುಗಡೆ ಮಾಡಲಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಭಾನುವಾರ ಸವಾಲು ಹಾಕಿದರು.

ನಗರದಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಮೇಕೆದಾಟು ಪಾದಯಾತ್ರೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಹಿಂದೆ ಕಾಂಗ್ರೆಸ್‌ ಸರ್ಕಾರ ಇತ್ತು, ನಂತರ ಮೈತ್ರಿ ಸರ್ಕಾರ ಬಂತು. ಆಗ ಏನೂ ಮಾಡಲಿಲ್ಲ. ಈಗ ಕಾಂಗ್ರೆಸ್‌ನವರು ಪಾದಯಾತ್ರೆ ಮಾಡುವುದಕ್ಕೆ ಹೊರಟಿದ್ದಾರೆ. ಇದು ರಾಜಕೀಯ ಗಿಮಿಕ್‌ ಎಂದು ಜಲ ಸಂಪನ್ಮೂಲ ಸಚಿವ ಕಾರಜೋಳ ಅವರು ಹೇಳಿಕೆ ನೀಡಿದ್ದಾರೆ. ‘ನನ್ನ ಬಳಿ ಮಹತ್ವದ ದಾಖಲೆಗಳಿವೆ. ಸ್ಫೋಟ ಮಾಡುತ್ತೇನೆ’ ಎಂದು ಹೇಳಿದ್ದಾರೆ. ದಾಖಲೆ ಇದ್ದರೆ ಕಾರಜೋಳ ಅವರು ಬಿಡುಗಡೆ ಮಾಡಲಿ, ರಾಜ್ಯದ ಜನರು ಅವುಗಳನ್ನು ನೋಡಲಿ‌’ ಎಂದು ಹೇಳಿದರು.

Share News

About admin

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *