Breaking News

ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್​ಡೌನ್ ಅನಿವಾರ್ಯ: ಗೃಹ ಸಚಿವ ಆರಗ ಜ್ಞಾನೇಂದ್ರ

ಚಿಕ್ಕಮಗಳೂರು: ಕೊರೊನಾ ಹೆಚ್ಚಾದರೆ ಸರ್ಕಾರಕ್ಕೆ ಲಾಕ್​ಡೌನ್ ಅನಿವಾರ್ಯವಾಗಲಿದೆಯಂತ, ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಚಿಕ್ಕಮಗಳೂರಿನ ಜ್ಯೂನಿಯರ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ ನೀಡಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ, ಕರೊನಾ ನಿಯಂತ್ರಣ ಮಾಡುವ ಸಲುವಾಗಿ ಜನತೆ ನೆರವು ನೀಡದೇ ಹೋದಲ್ಲಿ, ಲಾಕ್‌ಡೌನ್‌ ಮಾಡುವುದು ಅನಿವಾರ್ಯ ಅಂತ ಹೇಳಿದರು.

ಇನ್ನೂ ಇದೇ ವೇಳೆ ಅವರು ತಮ್ಮ ಮಾತನ್ನು ಮುಂದುವರೆಸಿ, ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ. ಕೊರೊನಾ ನಿಯಂತ್ರಣಕ್ಕೆ ಜನರು ಸಹಕಾರ ಕೊಡದಿದ್ದರೆ ಲಾಕ್​ಡೌನ್ ಅನಿವಾರ್ಯವಾಗಿದೆ ಅಂತ ಹೇಳಿದರು. ಇನ್ನೂ, ಸಚಿವ ಸಂಪುಟ ವಿಸ್ತರಣೆ ಕುರಿತಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ , ಸಿಎಂ ಬದಲಾವಣೆ ಸೇರಿದಂತೆ ಸಚಿವರ ಕೈ ಬಿಡುವ ಬಗ್ಗೆ ಹರಡಿರುವ ಸುದ್ದಿಯ ಬಗ್ಗೆ ಅವರು ಇವೆಲ್ಲ ಸುಳ್ಳು ಅಂತ ಹೇಳಿದರು.

Share News

About admin

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *