Breaking News

ಕೋವಿಡ್‌ 2022ರಲ್ಲಿ ಅಂತ್ಯವಾಗುತ್ತಾ?: WHO ಮುಖ್ಯಸ್ಥರ ಮಹತ್ವದ ಹೇಳಿಕೆ

ಹೊಸ ವರ್ಷ 2022 ಆರಂಭವಾಗುತ್ತಿದ್ದಂತೆ ವಿಶ್ವದಲ್ಲಿ ಕೊರೊನಾ ವೈರಸ್‌ ಸೋಂಕಿನ ಹೊಸ ಅಲೆಯು ಹರಡುವ, ಸೃಷ್ಟಿ ಆಗುವ ಭೀತಿ ಕಾಡುತ್ತಿದೆ. ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯಸ್ಥರು ಕೊರೊನಾ ವೈರಸ್‌ ಸೋಂಕಿನ ಅಂತ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

ವಿಶ್ವದಲ್ಲಿ ಈ ಹೊಸ ವರ್ಷದಲ್ಲಿ ಕೊರೊನಾ ವೈರಸ್‌ ಸೋಂಕು ಏರಿಕೆ ಆಗುತ್ತಿದೆ ಎಂಬ ಹಿನ್ನೆಲೆಯಿಂದಾಗಿ ವಿಶ್ವದ ಎಲ್ಲಾ ರಾಷ್ಟ್ರಗಳಲ್ಲಿ ಕೋವಿಡ್‌ ನಿಯಮವನ್ನು ಕಠಿಣ ಮಾಡಿದೆ.

ಕೆಲವು ರಾಷ್ಟ್ರಗಳಲ್ಲಿ ಲಾಕ್‌ಡೌನ್‌ನಂತಹ ಕ್ರಮವನ್ನು ಕೈಗೊಂಡಿರುವಾಗ ಇನ್ನು ಕೆಲವು ರಾಷ್ಟ್ರಗಳಲ್ಲಿ ನೈಟ್‌ ಕರ್ಫ್ಯೂ ಮೊದಲಾದ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್‌ ಈ ವರ್ಷದಲ್ಲೇ ಕೊರೊನಾ ವೈರಸ್‌ ಸಾಂಕ್ರಾಮಿಕ ಅಂತ್ಯವಾಗುತ್ತದೆ ಎಂದು ಹೇಳಿದ್ದಾರೆ.

“ನಾನು ಈ ವಿಚಾರದಲ್ಲಿ ದೃಢವಾಗಿದ್ದೇನೆ, ಕೊರೊನಾ ವೈರಸ್‌ ಸಾಂಕ್ರಾಮಿಕವು 2022ರಲ್ಲಿ ಕೊನೆಯಾಗುವ ಸಾಧ್ಯತೆ ಇದೆ,” ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್‌ ತಿಳಿಸಿದ್ದಾರೆ. 2020 ರಲ್ಲಿ ವಿಶ್ವದಲ್ಲೇ ಆವರಿಸಿದ ಕೊರೊನಾ ವೈರಸ್‌ ಸೋಂಕು ಈಗ ಹಲವಾರು ರೂಪಾಂತರಗಳನ್ನು ಹೊಂದಿದ್ದು, ಹೊಸ ಹೊಸ ಅಲೆಯನ್ನು ಸೃಷ್ಟಿ ಮಾಡುತ್ತಿದೆ.

ಕೊರೊನಾ ವೈರಸ್‌ ಸಾಂಕ್ರಾಮಿಕ ವಿಶ್ವದಲ್ಲಿ ಕಾಣಿಸಿಕೊಂಡು ಮೂರನೇ ವರ್ಷಕ್ಕೆ ನಾವು ಕಾಲಿರಿಸಿದ್ದೇವೆ. ಈ ವರ್ಷದಲ್ಲಿ ಹೊಸ ರೂಪಾಂತರ ಓಮಿಕ್ರಾನ್‌ ಭಾರೀ ಆತಂಕವನ್ನು ಸೃಷ್ಟಿ ಮಾಡುತ್ತಿದೆ. ಈ ಕೊರೊನಾ ವೈರಸ್‌ನ ಹೊಸ ರೂಪಾಂತರವು ಹೆಚ್ಚು ಸಾಂಕ್ರಾಮಿಕ ಎಂದು ತಜ್ಞರು ಹೇಳಿದ್ದಾರೆ. ಆದರೆ ಈ ಎಲ್ಲಾ ಬೆಳವಣಿಗೆಯ ನಡುವೆ ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥರು ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್‌, “ಕೊರೊನಾ ವೈರಸ್‌ ಸಾಂಕ್ರಾಮಿಕವು 2022ರಲ್ಲಿ ಕೊನೆಯಾಗಲಿದೆ. ನಾವು ಅಸಮಾನತೆಗೆ ಯಾವಾಗ ಅಂತ್ಯವನ್ನು ಹಾಡುತ್ತೇವೋ ಆಗ ವಿಶ್ವದಿಂದ ಕೊರೊನಾ ವೈರಸ್‌ ಸೋಂಕು ಕೊನೆಯಾಗಲಿದೆ,” ಎಂದು ಹೇಳಿದ್ದಾರೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *