Breaking News

ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್‌..? ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ,ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕರೋನ ಜೊತೆಗೆ ಒಮಿಕ್ರಾನ್‌ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ನಡುವೆ ಸಾಂಕ್ರಮಿಕ ರೋಗ ಹೆಚ್ಚದಂತೆ ತಡೆಗಟ್ಟುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರ ಎಲ್ಲಾ ರೀತಿಯಲ್ಲಿ ಮುಂದಾಗಿದೆ. ಈ ನಡುವೆ ನಾಳೆ ಸಂಜೆ ತಜ್ಞರ ಸಮಿತಿ ಜೊತೆ ಸಭೆ ನಡೆಸಲಿದ್ದು, ಗುರುವಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಪ್ರಕಟಿಸಲಾಗುತ್ತದೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಅವರು ಇಂದು, ನಗರದಲ್ಲಿನ ತಮ್ಮ ನಿವಾಸದ ಬಳಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಮಾಹಿತಿ ನೀಡಿದರು, ಇದೇ ವೇಳೆ ಅವರು ಮಾತನಾಡಿ,

ನಾಳೆ ಸಂಜೆಯೇ ತಜ್ಞರ ಸಮಿತಿ ಜೊತೆ ಚರ್ಚೆ ನಡೆಸಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ ಬಳಿಕ ಮುಂದಿನ ಯೋಜನೆಗಳ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದರು. ಇನ್ನೂ ನೆರೆ ರಾಜ್ಯಗಳಲ್ಲಿ ಬಹಳ ವೇಗದಲ್ಲಿ ಸೋಂಕು ಹರಡುತ್ತಿದೆ. ಹೀಗಾಗಿ ತಜ್ಞರ ಸಮಿತಿ ಜೊತೆಗೆ ನಡೆಯುವ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಅಂತ ಹೇಳಿದರು. ಕೊರೊನಾ ನಿಯಂತ್ರಣ ಮಾಡಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು ಎನ್ನುವುದರ ಬಗ್ಗೆ ತಜ್ಞರ ಸಮಿತಿಯ ಸಲಹೆಯನ್ನು ಕೇಳಲಾಗಿದೆ ಅಂತ ಅವರು ಇದೇ ವೇಳೆ ಹೇಳಿದರು.

ನಾಳೆ ಸಂಜೆಯೇ ತಜ್ಞರ ಸಮಿತಿ ಜೊತೆ ಚರ್ಚೆ ನಡೆಸಿ ಗುರುವಾರ ಸಚಿವ ಸಂಪುಟ ಸಭೆಯಲ್ಲಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿದ ಬಳಿಕ ಮುಂದಿನ ಯೋಜನೆಗಳ ತೀರ್ಮಾನವನ್ನು ತೆಗೆದುಕೊಳ್ಳಲಾಗುವುದು ಅಂತ ಹೇಳಿದರು. ಇನ್ನೂ ನೆರೆ ರಾಜ್ಯಗಳಲ್ಲಿ ಬಹಳ ವೇಗದಲ್ಲಿ ಸೋಂಕು ಹರಡುತ್ತಿದೆ. ಹೀಗಾಗಿ ತಜ್ಞರ ಸಮಿತಿ ಜೊತೆಗೆ ನಡೆಯುವ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಲಾಗುತ್ತದೆ ಅಂತ ಹೇಳಿದರು. ಕೊರೊನಾ ನಿಯಂತ್ರಣ ಮಾಡಲು ಏನೆಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬಹುದು ಎನ್ನುವುದರ ಬಗ್ಗೆ ತಜ್ಞರ ಸಮಿತಿಯ ಸಲಹೆಯನ್ನು ಕೇಳಲಾಗಿದೆ ಅಂತ ಅವರು ಇದೇ ವೇಳೆ ಹೇಳಿದರು

Share News

About admin

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *