ಬೆಂಗಳೂರು:ನೂರು ಎಕರೆ ವಿಸ್ತಾರದಲ್ಲಿ 320 ಕೋಟಿ ವೆಚ್ಚದಲ್ಲಿ ಕರ್ನಾಟಕ ರಾಜ್ಯ ಸಂಸ್ಕೃತ ವಿಶ್ವವಿದ್ಯಾನಿಲಯ ತಲೆ ಎತ್ತಲಿದೆ .ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನಲ್ಲಿ ನಿರ್ಮಾಣ ಗೊಳ್ಳಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಂಕುಸ್ಥಾಪನೆ ನೆರವೇರಿಸುತ್ತಾರೆ.
ಮಾಗಡಿ ತಾಲೂಕಿನ ತಿಪ್ಪಸಂದ್ರ ಹೋಬಳಿಯಲ್ಲಿ ಈ ವಿವಿ ಕ್ಯಾಂಪಸ್ ಸ್ಥಾಪನೆಯಾಗಲಿದೆ. ವೇದ, ವಿಜ್ಞಾನ, ಗಣಿತ ಹಾಗೂ ವಿಜ್ಞಾನ ತಂತ್ರಜ್ಞಾನಕ್ಕೆ ಸಂಸ್ಕೃತ ಭಾಷೆಯ ಕೊಡುಗೆ ಅನನ್ಯ. ಇದರ ಕುರಿತು ಜಗತ್ತಿನ ವಿವಿಧ ಮೂಲೆಗಳಿಂದ ಅಧ್ಯಯನ ಮಾಡಲು ಭಾರತಕ್ಕೆ ಸಾವಿರಾರು ವಿದ್ಯಾರ್ಥಿಗಳು ಬರುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಸಂಸ್ಕೃತ ಭಾಷೆಯ ಜೊತೆಗೆ ಆಧುನಿಕ ಶಿಕ್ಷಣ ಪಡೆಯುವಂತಹ ಕೇಂದ್ರಗಳನ್ನು ಇದೇ ವಿವಿಯ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

