Breaking News

ಅಶ್ವತ್ಥ, ಡಿ. ಕೆ. ಸುರೇಶ್ ಕಿತ್ತಾಟ : ಬಿಜೆಪಿ ರಾಜ್ಯಾಧ್ಯಕ್ಷ ಟ್ವೀಟ್


ಬೆಂಗಳೂರು:  ರಾಮನಗರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡಾ ಆಗಮಿಸಿದ್ದರು. ಸಿಎಂ ಎದುರಲ್ಲೇ ವೇದಿಕೆಯಲ್ಲಿ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಹಾಗೂ ಸಂಸದ ಡಿ. ಕೆ. ಸುರೇಶ್ ನಡುವಣ ಕಿತ್ತಾಟ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷರೂ ಆಗಿರುವ ಸಂಸದ ನಳಿನ್ ಕುಮಾರ್ ಕಟೀಲ್, ಸಚಿವ ಅಶ್ವತ್ಥ ನಾರಾಯಣ ವೇದಿಕೆ ಮೇಲೆ ಭಾಷಣ ಮಾಡುವಾಗ ಅವರತ್ತ ಮುನ್ನುಗ್ಗಿ ಬಂದು ಗೂಂಡಾಗಿರಿ ಪ್ರದರ್ಶಿಸಿ ಸಂಸದ ಡಿ. ಕೆ. ಸುರೇಶ್ ಹಾಗೂ ಕಾಂಗ್ರೆಸ್ ಮುಖಂಡರ ವರ್ತನೆ ಖಂಡನೀಯ. ಇಂತಹ ರಾಜಕೀಯ ಸಂಸ್ಕೃತಿ ನಮ್ಮ ರಾಜ್ಯಕ್ಕೆ ಒಳ್ಳೆಯದಲ್ಲ, ರಾಮನಗರ ಕರ್ನಾಟಕದಲ್ಲಿ ಇದೆ ಎನ್ನುವುದು ಕಾಂಗ್ರೆಸ್ಸಿಗರಲ್ಲಿ ನೆನಪಿರಲಿ ಎಂದಿದ್ದಾರೆ.

Share News

About admin

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *