Breaking News

ಸಚಿವ ಡಾ. ಅಶ್ವತ್ಥ್ ನಾರಾಯಣ ರಾಜೀನಾಮೆಗೆ ಆಗ್ರಹ

ವಿವಿಧ ಅಭಿವೃದ್ಧಿ ಕಾಮಗಾರಿಗಳ ಚಾಲನೆಗೆ ಸಂಬಂಧಿಸಿದ ಬೃಹತ್ ಕಾರ್ಯಕ್ರಮವನ್ನು ರಾಮನಗರ ಜಿಲ್ಲೆಯಲ್ಲಿ ಆಯೋಜಿಸಲಾಗಿತ್ತು.

ಸಚಿವ ಡಾ. ಅಶ್ವತ್ಥ್ ನಾರಾಯಣ ಅವರು ಭಾಷಣದ ಸಂದರ್ಭದಲ್ಲಿ ಅವಾಚ್ಯ ಶಬ್ಧಗಳನ್ನು ಬಳಸುವ ಜತೆಯಲ್ಲಿ ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ವರ್ತಿಸಿರುವುದು ಖಂಡನೀಯ. ಈ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಪ್ರಮುಖ ಜನಪ್ರತಿನಿಧಿಗಳು ಕೂಡಾ ಭಾಗಿಯಾಗಿದ್ದರು.

ಸಂಸದ ಡಿ.ಕೆ.ಸುರೇಶ್ ಅವರಿಗೆ ಅಗೌರವ ತರುವ ರೀತಿಯಲ್ಲಿ ಮಾತನಾಡಿರುವ ಹಾಗೂ ಗೂಂಡಾ ವರ್ತನೆ ತೋರಿರುವ ಸಚಿವ ಡಾ. ಅಶ್ವತ್ಥ್ ನಾರಾಯಣ ಅವರನ್ನು ಸಂಪುಟದಿಂದ ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಶಿವಮೊಗ್ಗ ನಗರ ಎನ್‌ಎಸ್‌ಯುಐ ವತಿಯಿಂದ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಎಸ್ ಸುಂದರೇಶ್ ,ರಾಜ್ಯ ಯುವ ಕಾಂಗ್ರೆಸ್ ನ ಕಾರ್ಯದರ್ಶಿ ಚೇತನ್, ಯುವ ಮುಖಂಡ ಮಧುಸೂದನ್ , ಹಾಪ್ ಕಾಮ್ಸ್ ನಿರ್ದೇಶಕರಾದ ಸಂತೆಕಡೂರು ವಿಜಯಕುಮಾರ್ , ಜಗದೀಶ್,ಪಿಳ್ಳಿಂಗೆರೆ ನಾಗರಾಜ್ , ಯೋಗೀಶ್ ಗೌಡ , ಅಕ್ಬರ್ , NSUIನ ನಗರಾಧ್ಯಕ್ಷ ವಿಜಯ್ , ಚಂದ್ರೋಜಿ ರಾವ್ ,ರವಿ , ವಿಕ್ರಂ,ಸುಮನ್, ಅಜಯ್,ಸುಹಾಸ್ , ಯುವ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಶಿವರಾಜ್ ,ಗೌತಮ್ , ಗಿರೀಶ್ , ಅಬ್ದುಲ್ , ಧನರಾಜ್ ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿ ಗುಂಡಾ ಸಚಿವ ಅಶ್ವತ್ ನಾರಾಯಣ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Share News

About admin

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *