Breaking News

ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ ಕೆಲಸ ಮಾಡಲು ಸಹಕಾರಿ

ಹುಬ್ಬಳ್ಳಿ: ಪೊಲೀಸ್ ಇಲಾಖೆ ಕ್ರೀಡೆಗಳನ್ನು ಆಡಲು ಅವಕಾಶ ನೀಡಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಿ. ಕ್ರೀಡೆ ಏಕಾಗ್ರತೆ ಹಾಗೂ ಸ್ವಾಸ್ಥ್ಯಚಿತ್ತದಿಂದ ಕೆಲಸ ಮಾಡಲು ಸಹಕಾರಿ. ಒಲಂಪಿಕ್ ಕ್ರೀಡಾ ಕೂಟದಲ್ಲಿ ಒಂದು ನಿಮಿಷದ ಸಾಧನೆ ತೋರಲು ಹಲವು ವರ್ಷಗಳ ಪ್ರಯತ್ನಬೇಕು. ಜನರ ಸುರಕ್ಷತೆಯ ಜವಬ್ದಾರಿ ಪೊಲೀಸರ ಹೆಗಲ ಮೇಲಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಉಮೇಶ ಎಂ ಅಡಿಗ ಹೇಳಿದರು.

ನಗರದ ಹೊಸ ಸಿ.ಆರ್. ಮೈದಾನದಲ್ಲಿಂದು ಪೊಲೀಸ್ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.

ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವವರಿಗೆ ದೈಹಿಕ ಚಟುವಟಿಕೆ ಅಗತ್ಯ‌. ದೈಹಿಕ ಹಾಗೂ ಬೌದ್ಧಿಕ ಆರೋಗ್ಯಕ್ಕೆ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಿದೆ. ಜನರು ಇಂದು ನೆಮ್ಮದಿಯಿಂದ ಇದ್ದಾರೆ ಎಂದರೆ ಅದಕ್ಕೆ ಪೊಲೀಸರು ಕಾರಣ. ವರ್ಷವಿಡೀ ಹಗಲಿರಳು ರಜೆ ಇಲ್ಲದೆ ಕೆಲಸ ನಿರ್ವಹಿಸುತ್ತೀರಿ ಎಂದರು.

ಪೊಲೀಸ್ ಆಯುಕ್ತ ಲಾಭುರಾಮ ಅತಿಥಿಗಳನ್ನು ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು.ಕ್ರೀಡಾಕೂಟದಲ್ಲಿ ಭಾಗವಹಿಸಿದ ತಂಡಗಳಿಂದ ಆಕರ್ಷಕ ಪಥಸಂಚಲನ ಜರುಗಿತು. ಪಾರಿವಾಳ ಹಾಗೂ ಕೇಸರಿ, ಬಳಿ ಹಾಗೂ ಹಸಿರು ಬಲೂನುಗಳನ್ನು ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಸಶಸ್ತ್ರ ಮೀಸಲು ಪಡೆಯ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ ಮುರಾಳ ಪಥ ಸಂಚಲನ ಮುಂದಾಳತ್ವ ವಹಿಸಿ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿ ಬೊಧಿಸಿದರು. ಸಶಸ್ತ್ರ ಮೀಸಲು ಪಡೆಯ ಈರಣ್ಣ ದೇಸಾಯಿ ಕ್ರೀಡಾಜ್ಯೋತಿ ಹಿಡಿದು ಓಡುವುದರ ಮೂಲಕ ಕ್ರೀಡಾಕೂಡಕ್ಕೆ ವಿಧ್ಯುಕ್ತ ಆರಂಭ ಒದಗಿಸಿದರು.

ಸಿ.ಆರ್.ಉಪ ಪೊಲೀಸ್ ಆಯುಕ್ತ ಎಸ್.ವಿ.ಯಾದವ್ ಅವರು ವಂದಿಸಿದರು. ಸಿ.ಆರ್. ದಕ್ಷಿಣ, ಉತ್ತರ, ಮಹಿಳಾ‌, ಧಾರವಾಡ ಹಾಗೂ ಸಂಚಾರ ವಿಭಾಗದ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಉಪ ಪೊಲೀಸ್ ಆಯುಕ್ತ ಸಾಹಿಲ್ ಬಾಗ್ಲಾ, ಆರ್.ಬಿ.ಬಸರಗಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *