ಚಿಂಚೋಳಿ: ‘ಜೆಡಿಎಸ್ ಬಡವರ ಪಕ್ಷ. ಈ ಪಕ್ಷವನ್ನು ಸಂಘಟಿಸುವ ಕೆಲಸ ಕೊನೆಯವರೆಗೂ ಮಾಡುತ್ತೇನೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಈ ಭಾಗದ ನೀರಾವರಿ ಯೋಜನೆಗಳನ್ನು ಮಂಜೂರು ಮಾಡಿಸಿ ರೈತರಿಗೆ ಅನುಕೂಲ ಮಾಡಿದ್ದೇನೆ’ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು.
ಪಟ್ಟಣದ ಹಾರಕೂಡ ಚನ್ನಬಸವ ಶಿವಯೋಗಿಗಳ ಕಲ್ಯಾಣ ಮಂಟಪದಲ್ಲಿ ಮಂಗಳವಾರ ನಡೆದ ಚಿಂಚೋಳಿ ಮತಕ್ಷೇತ್ರದ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಚಿಂಚೋಳಿ ಕ್ಷೇತ್ರದಿಂದ ಸಂಜೀವನ್ ಯಾಕಾಪೂರ ಚುನಾವಣೆಯಲ್ಲಿ ನಿಲ್ಲುತ್ತಾರೆ’ ಎಂದರು.
ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಕೇದಾರಲಿಂಗಯ್ಯ ಹಿರೇಮಠ, ಮುಖಂಡರಾದ ಎಚ್.ಸಿ. ನಿರಾವರಿ, ಬಂಡೆಪ್ಪ ಖಾಶೆಂಪೂರ, ಶಾಮರಾವ ಸೂರನ, ಶಂಕರ ಕಟ್ಟಿಸಂಗಾವಿ, ತಾಲ್ಲೂಕು ಘಟಕದ ಅಧ್ಯಕ್ಷ ರವಿಶಂಕರ ರೆಡ್ಡಿ ಮುತ್ತಂಗಿ, ವಿಷ್ಣುಕಾಂತ ಮೂಲಗೆ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





