ದಾವಣಗೆರೆ: ಜಿಲ್ಲೆಯ ಆನಗೋಡು ರಾಷ್ಟ್ರೀಯ ಹೆದ್ದಾರಿ ಬಳಿ ಒಕ್ಕಣಿಗೆ ಹಾಕಿದ್ದ ರಾಗಿ ಹುಲ್ಲಿನ ಮೇಲೆ ಓಮ್ನಿ
ಕಾರು ಬರುತ್ತಿದ್ದಂತೆ, ಬೆಂಕಿ ಹೊತ್ತಿ ಧಗಧಗನೆ ಉರಿದು ಸುಟ್ಟು ಭಸ್ಮವಾಗಿದೆ.

ಫಜಲ್ ಅಹಮ್ಮದ್ ಎಂಬವರಿಗೆ ಸೇರಿದ ಕಾರಾಗಿದೆ. ಅಂಗಡಿಗೆ ದಿನಸಿ ಸಾಮನುಗಳನ್ನ ಒಯ್ಯುವಾಗ ಹೊತ್ತಿ ಉರಿದಿದೆ. ಓಮ್ನಿಯಲ್ಲಿ ಬೆಂಕಿ ಕಾಣಿಸಿಕೊಳ್ಳುತಿದ್ದಂತೆ ಚಾಲಕ ಹೊರ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿ ಶಾಮಕ ಸಿಬ್ಬಂದಿ ಬರುವಷ್ಟರಲ್ಲೆ ಓಮ್ನಿ ಕಾರು ಸಂಪೂರ್ಣ ಭಸ್ಮವಾಗಿದೆ.ಬೆಂಕಿ ಹೊತ್ತಿ ಉರಿಯುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದಾವಣಗೆರೆ ರೂರಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

