Breaking News

ವಾರಾಂತ್ಯ ಕರ್ಫ್ಯೂ : ಏನೆಲ್ಲ ಇರುತ್ತೆ ? ಇರುವುದಿಲ್ಲ?

ಬೆಂಗಳೂರು: ಕೋವಿಡ್ ಪ್ರಕರಣಗಳು ಏಕಾಏಕಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ಶುಕ್ರವಾರದಿಂದ (ಜ.7) ರಾಜ್ಯದಾದ್ಯಂತ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ.

ಏನೆಲ್ಲ ಇರುತ್ತೆ…

* ಮೆಡಿಕಲ್ ಸ್ಟೋರ್, ಆಸ್ಪತ್ರೆಗಳು ಕಾರ್ಯನಿರ್ವಹಿಸಲಿವೆ.
* ದಿನಸಿ ಅಂಗಡಿ, ಹಾಲು, ತರಕಾರಿ, ಔಷಧ, ಪೆಟ್ರೋಲ್ ಮತ್ತಿತರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
* ಹೋಟೆಲ್‌ಗಳಲ್ಲಿ ಪಾರ್ಸೆಲ್ ಸೇವೆ ಮಾತ್ರ ಇರುತ್ತದೆ
* ಐಟಿ ಹಾಗೂ ಇತರೆ ಉದ್ಯಮ ಸಂಸ್ಥೆಗಳ ಸಿಬ್ಬಂದಿ ಗುರುತಿನ ಚೀಟಿಯೊಂದಿಗೆ ಸಂಚಾರಕ್ಕೆ ಅನುಮತಿ
*ಇ-ಕಾಮರ್ಸ್‌ ಸೇವೆಗೆ ಅವಕಾಶ
* ರೈಲು, ವಿಮಾನ, ಬಸ್‌ ಸಂಚಾರ ಇರಲಿದೆ
* ಪ್ರಯಾಣ ಚೀಟಿ ಇರುವವರು ಆಟೋ, ಟ್ಯಾಕ್ಸಿ ಬಳಸಲು ಅವಕಾಶ

ಏನೆಲ್ಲ ಇರುವುದಿಲ್ಲ…

* ಸಾರ್ವಜನಿಕ ಉದ್ಯಾನಗಳು ಬಂದ್‌
* ಯಾವುದೇ ‍ಪ್ರತಿಭಟನೆ, ಜಾತ್ರೆ, ರ‍್ಯಾಲಿ, ಮೆರವಣಿಗೆಗೆ ಅವಕಾಶ ಇರುವುದಿಲ್ಲ.
* ಶಾಲಾ-ಕಾಲೇಜ್‌ಗಳು ಬಂದ್‌
* ತುರ್ತು ಸೇವೆ ಬಿಟ್ಟು ಯಾವುದೇ ವಾಹನಗಳ ಸಂಚಾರಕ್ಕೆ ಅವಕಾಶ ಇಲ್ಲ.
* ಅನಗತ್ಯ ಓಡಾಟ, ಸಂಚಾರಕ್ಕೆ ಅವಕಾಶ ಇಲ್ಲ

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *