Breaking News

ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸುವುದಿಲ್ಲ, ನಾವು ಜನರನ್ನು ಉಳಿಸುವ ಕೆಲಸ ಮಾಡುತ್ತೇವೆ: ಸಿದ್ದರಾಮಯ್ಯ

ಬೆಂಗಳೂರು: ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿಯೇ ತೀರುತ್ತೇವೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ. ನಾವು ಜನರನ್ನ ಉಳಿಸುವ ಕೆಲಸವನ್ನೂ‌ ಮಾಡ್ತೇವೆ. ಪಾದಯಾತ್ರೆಯಿಂದ ಯಾರಿಗೂ ತೊಂದರೆಯಾಗುವುದಿಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕು. ಸ್ಯಾನಿಟೈಸ್ ಮಾಡಿಕೊಳ್ಳಬೇಕು, ಅಂತರ ಕಾಯ್ದುಕೊಳ್ಳಬೇಕು ಎಂಬ ಕೊರೋನಾ ನಿಯಮ ಪಾಲಿಸುತ್ತೇವೆ ಎಂದರು.

ವೀಕೆಂಡ್ ಲಾಕ್ ಡೌನ್ ಇದ್ದರೂ ಜನವರಿ 9ರಿಂದ ಪಾದಯಾತ್ರೆ ಮಾಡಿಯೇ ಮಾಡುತ್ತೇವೆ, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ, ನಾವು ಜನರ ಪ್ರಾಣ ಉಳಿಸುವ ಕೆಲಸವನ್ನೂ ಮಾಡುತ್ತೇವೆ, ಪಾದಯಾತ್ರೆಯಿಂದ ಜನರಿಗೆ ತೊಂದರೆಯಾಗುವುದಿಲ್ಲ ಎಂದರು.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *