ಆಟೋ – ಕಾರ್‌ ನಡುವಿನ ಅಪಘಾತದಲ್ಲಿ ಮಹಿಳೆ, ಮಗು ಸಾವು

ಚಿತ್ರದುರ್ಗ: ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದರ ಪರಿಣಾಮ ಮಗು ಹಾಗೂ ಮಹಿಳೆ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ಸಂಭವಿಸಿದೆ.

ಈ ಘಟನೆ ಹೊಸದುರ್ಗ ತಾಲೂಕಿನ ನೀರಗುಂದ ಪೀಲಾಪುರ ಗೇಟ್ ಹತ್ತಿರ ನಡೆದಿದ್ದು, ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಾರು ತರೀಕೆರೆ ತಾಲೂಕಿನ ತೀರು ಮುರುಡಿ ದೇವಸ್ಥಾನಕ್ಕೆ ತೆರಳಿ, ಜವಳ ಕಾರ್ಯಕ್ರಮ ಮುಗಿಸಿಕೊಂಡು ಮರಳಿ ಬರುತ್ತಿತ್ತು. ಈ ಸಂದರ್ಭದಲ್ಲಿಯೇ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಹೊನ್ನಕೇರಿ ಗೊಲ್ಲಹಟ್ಟಿಯ ಕರಿಯಮ್ಮ(5) ಹಾಗೂ ಧನುಷ್(3) ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕ ಆಗಮಿಸಿದ ಪೊಲೀಸರು ದೂರು ದಾಖಲಿಸಿಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಬೆಲೆ ಏರಿಕೆ ಕುರಿತು ಸಿಹಿ ಸುದ್ದಿ ನೀಡಿದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ …

Leave a Reply

Your email address will not be published. Required fields are marked *

You cannot copy content of this page