ನವದೆಹಲಿ: ದೇಶದಲ್ಲಿ ಕೊರೋನಾ ಜೊತೆಗೆ ಓಮಿಕ್ರಾನ್ ಪ್ರಕರಣಗಳ ಆರ್ಭಟ ಕೂಡ ಹೆಚ್ಚಾಗಿದೆ. ಇದೇ ಸಂದರ್ಭದಲ್ಲಿ ದೇಶದಲ್ಲಿ ಒಮಿಕ್ರಾನ್ ವೈರಸ್ ಗೆ ಮೊದಲ ಬಲಿ ರಾಜಸ್ಥಾನದಲ್ಲಿ ಪಡೆದಿರೋದಾಗಿ ತಿಳಿದು ಬಂದಿದೆ.
ಇಂದು ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿದಂತ ಕೋವಿಡ್ ಹಾಗೂ ಒಮಿಕ್ರಾನ್ ಕೇಸ್ ಗಳ ಸಂಖ್ಯೆಯ ವರದಿ ಪ್ರಕಾರ, ದೇಶದಲ್ಲಿ ಒಮೈಕ್ರಾನ್ ಪ್ರಕರಣಗಳು ಈಗ 2,135ಕ್ಕೆ ಏರಿದೆ.
ಪಶ್ಚಿಮ ರಾಜ್ಯ ರಾಜಸ್ಥಾನದಲ್ಲಿ ವೇಗವಾಗಿ ಹರಡುತ್ತಿರುವ ಒಮೈಕ್ರಾನ್ ರೂಪಾಂತರಕ್ಕೆ ಸಂಬಂಧಿಸಿದ ಮೊದಲ ಕೋವಿಡ್-19 ಸಾವಿನ ಬಗ್ಗೆ ಭಾರತ ಬುಧವಾರ ವರದಿ ಮಾಡಿದೆ ಎಂದು ಫೆಡರಲ್ ಆರೋಗ್ಯ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

