Breaking News

ವೀಕೆಂಡ್ ಕರ್ಫ್ಯೂ ಕುರಿತು ಬಿಜೆಪಿಯಲ್ಲಿ ಬೇಸರ


ಶಿವಮೊಗ್ಗ: ಕೊರೋನಾದಿಂದಾಗಿ ಲಾಕ್ ಡೌನ್ ಮಾಡುವುದರಿಂದ ಜನರು ತಕರಾರು ಎತ್ತುವುದು ನಿಜ.ಓಮಿಕ್ರಾನ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ಸರಕಾರ ಘೋಷಿಸಿರುವ ನೈಟ್ ಮತ್ತು ವೀಕೆಂಡ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಲ್ಲಿ ವಿರೋಧ ವ್ಯಕ್ತವಾಗುತ್ತಿರುವುದು ಗೊತ್ತೇ ಇದೆ.

ಆದರೆ ಸರಕಾರದ ನಿರ್ಧಾರಕ್ಕೆ ಬಿಜೆಪಿಯಲ್ಲೂ ಅಸಮಾಧಾನ ವ್ಯಕ್ತವಾಗುತ್ತಿರುವುದು ರಾಜಕೀಯದಲ್ಲಿ ಹೊಸ ವಿಚಾರವಾಗಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಸೋಂಕು ಹೆಚ್ಚುತ್ತಿದೆ, ಅಲ್ಲಿ ಕರ್ಫ್ಯೂ ಹಾಕಲಿ, ರಾಜ್ಯದ ಇತರ ಕಡೆ ಯಾಕೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.

ಬೆಂಗಳೂರು, ದಕ್ಷಿಣ ಕನ್ನಡ, ಧಾರವಾಡ ಮತ್ತು ಉಡುಪಿ ಜಿಲ್ಲೆಯಲ್ಲಿ ಸೋಂಕು ಹೆಚ್ಚಾಗುತ್ತಿದೆ. ಆದರೆ, ರಾಜ್ಯದ ಇತರ ಕೆಲವು ಜಿಲ್ಲೆಗಳಲ್ಲಿ ನಗಣ್ಯ ಎನ್ನಬಹುದಾದ ಕೇಸುಗಳು ವರದಿಯಾಗುತ್ತಿವೆ. ಆದರೂ, ಇಡೀ ರಾಜ್ಯಕ್ಕೆ ಕರ್ಫ್ಯೂ ವಿಧಿಸಿರುವುದಕ್ಕೆ ಆ ಜಿಲ್ಲೆಗಳಲ್ಲಿ ಅಕ್ರೋಶ ಹೆಚ್ಚಾಗುತ್ತಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *