ಚಂಡೀಗಢ: ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರು ಪಂಜಾಬ್ ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ವೇಳೆ ಭದ್ರತಾ ಲೋಪ ಉಂಟಾದ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.
ಪ್ರಧಾನಿ ಮೋದಿಯವರು ಇಂದು ಫಿರೋಜ್‌ಪುರ ಜಿಲ್ಲೆಗೆ ಭೇಟಿ ನೀಡಿ ಹಿಂತಿರುಗಬೇಕಾಯಿತು.
ಇದಕ್ಕಾಗಿ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ನಾವು ನಮ್ಮ ಪ್ರಧಾನಿಯನ್ನು ಗೌರವಿಸುತ್ತೇವೆ. ನಾನು ಇಂದು ಬಟಿಂಡಾದಲ್ಲಿ ಪ್ರಧಾನ ಮಂತ್ರಿ ಮೋದಿ ಅವರನ್ನು ಬರಮಾಡಿಕೊಳ್ಳಬೇಕಾಗಿತ್ತು. ಆದರೆ, ನನ್ನ ಜೊತೆಗಿದ್ದವರಿಗೆ ಕೋವಿಡ್ ಪಾಸಿಟಿವ್ ಬಂದಿದ್ದರಿಂದ ಮತ್ತು ಪಾಸಿಟಿವ್ ಬಂದ ಕೆಲವರ ಜತೆ ನಿಕಟ ಸಂಪರ್ಕದಲ್ಲಿದ್ದ ಕಾರಣ ಇಂದು ಪ್ರಧಾನಿಯವರನ್ನು ಬರಮಾಡಿಕೊಳ್ಳಲು ಹೋಗಿರಲಿಲ್ಲ ಎಂದು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

