ಬೆಂಗಳೂರು: ಕೊರೋನಾ ಬಹಳ ವೇಗವಾಗಿ ಹರಡುತ್ತದೆ, ಅದೇ ರೀತಿ ಕಡಿಮೆಯಾಗುತ್ತಾ ಹೋಗುತ್ತದೆ . ಕೋವಿಡ್ ಮೂರನೆ ಅಲೆಯು ಮೊದಲ ಹಾಗೂ ಎರಡನೆ ಅಲೆ ರೀತಿ ದೀರ್ಘ ಕಾಲ ಇರುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಬುಧವಾರ ಸದಾಶಿವ ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ದೇಶಗಳಲ್ಲಿನ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಮುಂದಿನ 4-6 ವಾರಗಳ ಕಾಲ ಬಹಳ ಎಚ್ಚರಿಕೆಯಿಂದ ನಡೆದುಕೊಂಡರೆ, ಈ ಮೂರನೆ ಅಲೆಯನ್ನು ನಿಯಂತ್ರಣಕ್ಕೆ ತರಬಹುದು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

