Breaking News

ಪರಿಹಾರ ಪ್ಯಾಕೇಜ್ ಘೋಷಿಸಬೇಕು : ಮಲ್ಲಿಕಾರ್ಜುನ ಖರ್ಗೆ ಒತ್ತಾಯ



ಕಲಬುರಗಿ: ಕೊರೊನಾ ಕಾರಣಕ್ಕಾಗಿ ಲಾಕ್‌ಡೌನ್‌ ಮಾಡುವ ಬಗ್ಗೆ ಸರ್ಕಾರ ಪುನರ್‌ ಪರಿಶೀಲಿಸಬೇಕು. ಒಂದೊಮ್ಮೆ ಲಾಕ್‌ಡೌನ್ ಮಾಡುವುದೇ ಅನಿವಾರ್ಯವಾದರೆ ಕಾರ್ಮಿಕರು, ರೈತರು ಸೇರಿದಂತೆ ಎಲ್ಲ ಬಗೆಯ ದುಡಿಯುವ ಜನತೆಗೆ ಸೂಕ್ತ ಪರಿಹಾರ ಪ್ಯಾಕೇಜ್ ಘೋಷಿಸಬೇಕು ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಳೆದ ಬಾರಿ ಲಾಕ್‌ಡೌನ್‌ ಘೋಷಣೆ ಮಾಡಿದ ಸಂದರ್ಭದಲ್ಲೂ ಸರ್ಕಾರ ಸೂಕ್ತ ಪ್ಯಾಕೇಜನ್ನು ಜನರಿಗೆ ತಲುಪಿಸಿಲ್ಲ. ಕಟ್ಟಡ ಕಾರ್ಮಿಕರಿಗೆ ಅವರ ನಿಧಿಯಿಂದಲೇ ನೆರವು ಕೊಟ್ಟಿದೆಯೇ ಹೊರತು ತನ್ನ ಬೊಕ್ಕಸದಿಂದ ಕೊಡಲಿಲ್ಲ. ಆ ನಿಧಿಯೂ ಕಾರ್ಮಿಕರಿಗೆ ದೊರಕಿಲ್ಲ. ಹೀಗಾಗದಂತೆ ಎಚ್ಚರ ವಹಿಸಬೇಕು’ ಎಂದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *