Breaking News

ನೇತ್ರಾವತಿ ನದಿಗೆ ನೂತನ ಸೇತುವೆ

ಬಂಟ್ವಾಳ: ಕಳೆದ ಹಲವು ವರ್ಷಗಳಿಂದ ಅರ್ಧಕ್ಕೆ ನಿಂತಿದ್ದ ಹೆದ್ದಾರಿ ಕಾಮಗಾರಿಯು ಕೆಲವು ತಿಂಗಳ ಹಿಂದೆ ಆರಂಭಗೊಂಡಿದ್ದು, ಕಾಮಗಾರಿ ಗಳನ್ನು ಎರಡು ವಿಭಾಗ ಗಳನ್ನಾಗಿ ಮಾಡಿ ಪ್ರತ್ಯೇಕ ಕಂಪೆನಿಗಳಿಗೆ ಗುತ್ತಿಗೆ ನೀಡಲಾಗಿದೆ. ಬಿ.ಸಿ.ರೋಡ್‌- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ-75 ಅಭಿವೃದ್ಧಿಯ ಭಾಗವಾಗಿ ಪಾಣೆ ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ನೂತನ ಸೇತುವೆ ರಚನೆಯ ಕಾಮಗಾರಿ ಇದೀಗ ಆರಂಭಗೊಂಡಿದೆ.

ನಿರೀಕ್ಷೆಯಂತೆ ನಡೆದರೆ ಎರಡು ವರ್ಷಗಳಲ್ಲಿ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳುತ್ತಿದ್ದಂತೆ 386 ಮೀ.
ಉದ್ದದ ಹೊಸ ಸೇತುವೆಯೂ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

ಅಡ್ಡಹೊಳೆಯಿಂದ ಪೆರಿಯಶಾಂತಿ ತನಕ 15 ಕಿ.ಮೀ. ಉದ್ದದ ಹೆದ್ದಾರಿ ಕಾಮಗಾರಿಯನ್ನು 317 ಕೋ.ರೂ. ಪುಣೆ ಮೂಲದ ಶ್ರೀ ಎಸ್‌.ಎಂ.ಔತಾಡೆ ಪ್ರೈವೆಟ್‌ ಕಂಪೆನಿ ನಿರ್ವಹಿಸುತ್ತಿದೆ. ಪೆರಿಯಶಾಂತಿಯಿಂದ ಬಿ.ಸಿ.ರೋಡ್‌ ತನಕ 49 ಕಿ.ಮೀ. ರಸ್ತೆ ಕಾಮಗಾರಿಯನ್ನು ಸುಮಾರು 1,600 ಕೋ.ರೂ. ಗಳಲ್ಲಿ ಹೈದರಾಬಾದ್‌ ಮೂಲದ ಕೆಎನ್‌ಆರ್‌ ಕನ್‌ಸ್ಟ್ರಕ್ಷನ್‌ ಸಂಸ್ಥೆಯು ನಿರ್ವಹಿಸುತ್ತಿದೆ.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *