ಬೆಂಗಳೂರು : ವಿಧಾನಪರಿಷತ್ ಸದಸ್ಯರ ಪಾತ್ರದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿಪ್ರಾಯಪಟ್ಟಿದ್ದಾರೆ. ಬುಧವಾರ ವಿಕಾಸಸೌಧದಲ್ಲಿ ಪರಿಷತ್ ಅವಧಿ ಮುಕ್ತಾಯವಾಗಿರುವ ಸದಸ್ಯರಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆಯಲ್ಲಾದ ನಿರ್ಣಯಗಳನ್ನು ಮರು ದೃಢೀಕರಣ ಮಾಡುವ ಗುರುತರ ಜವಾಬ್ದಾರಿ ವಿಧಾನಪರಿಷತ್‌ನದ್ದಾಗಿದೆ .
ಪರಿಷತ್‌ಗೆ ತನ್ನದೇ ಆದ ಇತಿಹಾಸ, ಪರಂಪರೆ ಇದೆ ಎಂಬುದನ್ನು ಯಾರೂ ಮರೆಯುವಂತಿಲ್ಲ. ಪರಿಷತ್‌ನ ಇತಿಹಾಸ, ಪರಂಪರೆಯನ್ನು ಹೇಗೆ ಉಳಿಸಿಕೊಳ್ಳಬೇಕು ಎಂಬ ಪ್ರಶ್ನೆಯ ಜತೆಗೆ ವಿಧಾನಪರಿಷತ್‌ನ ಅಗತ್ಯವಿದೆಯೇ ಎಂಬ ಚರ್ಚೆ ಆಯಾ ಸಂದರ್ಭದಲ್ಲಿ ಹುಟ್ಟಿಕೊಂಡಿದೆ. ಪರಿಸ್ಥಿತಿ, ಸಂದರ್ಭ ಆಧರಿಸಿ ಪ್ರಶ್ನೆ ಹುಟ್ಟಿಕೊಂಡಿದೆ. ಹೀಗಾಗಿ ಪರಿಷತ್‌ನ ಮೌಲ್ಯ ಹೆಚ್ಚಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

