Breaking News

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಮೇಲೆ ಕೊರೋನಾ ಕರಿಛಾಯೆ



ಮಂಗಳೂರು; ಕರ್ನಾಟಕದಲ್ಲಿ ಜನಸಂದಣಿ ಸೇರುವನ್ನು ತಡೆಯಲು ಅನೇಕ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಹೊಸ ಕೋವಿಡ್ ಪ್ರಕರಣ ಮತ್ತು ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಇದರಿಂದಾಗಿ ಈ ನಿಯಮಗಳ ಪ್ರಭಾವ ದೇವಾಲಯಗಳ ಮೇಲೂ ಬಿದ್ದಿದೆ.

ದೇವಸ್ಥಾನಗಳಲ್ಲೂ ಕೇವಲ ದರ್ಶನ ಮಾತ್ರ ಎಂಬ ನಿಯಮ ತಂದಿದೆ. ಈ ಹಿನ್ನಲೆಯಲ್ಲಿ  ಜಿಲ್ಲೆಯ ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರಿಗೆ ಜನವರಿ 16ರವರೆಗೆ ಕೇವಲ‌ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗಿದೆ.

ಈ ಬಗ್ಗೆ ದೇವಸ್ಥಾನದ‌ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ದೇಶದಾದ್ಯಂತ ಮತ್ತು ರಾಜ್ಯಾದ್ಯಂತ ಓಮಿಕ್ರಾನ್ ವೈರಸ್ ಹರಡುವಿಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರದ ಆದೇಶ ಸಂಖ್ಯೆ RD 158 TNR 2000, ದಿನಾಂಕ 14-01-2022ರ ಪ್ರಕಾರ ದಿನಾಂಕ 6-01-2022 ರಿಂದ ಮುಂದಿನ ಆದೇಶದವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಭಕ್ತಾದಿಗಳ ಯಾವುದೇ ಸೇವಾದಿಗಳು ನಡೆಸಲ್ಪಡುವುದಿಲ್ಲ ಎಂದು ಹೇಳಿದೆ.

Share News

About admin

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *