Breaking News

ರಾಜ್ಯದಲ್ಲಿ ಇಂದು ಅಬ್ಬರಿಸಿದ ಕೊರೋನಾ



ಬೆಂಗಳೂರು: ರಾಜ್ಯದಲ್ಲಿ ಇಂದು  ಕೊರೋನಾ ಮಹಾಸ್ಪೋಟವಾಗಿದ್ದು, ಜನರಲ್ಲಿ ಮತ್ತೇ ಆತಂಕ ಹೆಚ್ಚುತ್ತಿದೆ. ಇದೀಗ ಸ್ವಲ್ಪಮಟ್ಟಿಗೆ ಏರಿಕೆಯನ್ನು ಜೀವನದಲ್ಲಿ ಕಂಡಂತಹ ಜನರಿಗೆ ಮತ್ತೇ ತಲೆ ನೋವು ಉಂಟಾಗಿದೆ.

ಇಂದಿನ ಕೊರೋನಾ ಮಾಹಿತಿ

ಒಂದೇ ದಿನ ಬರೋಬ್ಬರಿ 5031 ಜನರಿಗೆ ಸೋಂಕು ತಗುಲಿದೆ. ರಾಜಧಾನಿ ಬೆಂಗಳೂರಿನಲ್ಲಿ 4324 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದರೊಂದಿಗೆ ಬೆಂಗಳೂರಿನಲ್ಲಿ ಹೊಸ ಕೇಸ್ 4 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಹೊಸ ಕೇಸ್ ಸಂಖ್ಯೆ 5 ಸಾವಿರ ಗಡಿ ದಾಟಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡ 3.95 ರಷ್ಟು ಇದೆ. ಬೆಂಗಳೂರಿನಲ್ಲಿ ಪಾಸಿಟಿವಿಟಿ ದರ ಶೇಕಡ 7.5 ರಷ್ಟು ಇದೆ. ಬೆಂಗಳೂರಿನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 1,27,194 ಕೋವಿಡ್ ಪರೀಕ್ಷೆ ಮಾಡಲಾಗಿದೆ.

Share News

About admin

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *