ಧಾರವಾಡ: ಆಕಸ್ಮಿಕ ಬೆಂಕಿ ಹೊತ್ತಿಕೊಂಡ ಪರಿಣಾಮ ಅಪಾರ ಪ್ರಮಾಣದ ಕಬ್ಬು ಬೆಂಕಿಗಾಹುತಿಯಾಗಿರುವಂತಹ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಬಳಿ ನಡೆದಿದೆ.
ಇನ್ನು ಬೆಂಕಿಯ ಕೆನ್ನಾಲಿಗೆ ಅಕ್ಕಪಕ್ಕದ ಜಮೀನುಗಳಿಗೆ ವ್ಯಾಪಿಸುತ್ತ ಸಾಗಿದ್ದು, ಅಕ್ಕಪಕ್ಕದ ಜಮೀನುಗಳ ರೈತರಲ್ಲಿ ಆತಂಕ ಮೂಡುವಂತೆ ಮಾಡಿದೆ. ಹೀಗಾಗಿ ಸ್ಥಳೀಯರು ಸಮರೋಪಾಧಿಯಲ್ಲಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅಲ್ಲದೇ ಅಗ್ನಿ ಅವಘಡ ಸುದ್ದಿ ತಿಳಿಯುತ್ತಲೇ ಸಮಯ ಪಜ್ಞೆ ಮೆರೆದಿರುವ ಪೊಲೀಸ್ ಇಲಾಖೆಯ ಸಿಬ್ಬಂಧಿ ಹವಾಲ್ದಾರ ಮಲ್ಲಿಕಾರ್ಜುನ ಚೌಡಣ್ಣವರ ತಕ್ಷಣ ಅಗ್ನಿಶಾಮಕ ದಳಕ್ಕೆ ಸುದ್ದಿ ತಿಳಿಸಿದ್ದಾರೆ.
ಹೀಗಾಗಿ ಅಗ್ನಿಶಾಮಕದಳದ ಸಿಬ್ಬಂಧಿ ಕೂಡ ಸ್ಥಳಕ್ಕಾಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.ಇನ್ನು ಅಗ್ನಿ ಅವಘಡದಲ್ಲಿ ಲಕ್ಷಾಂತರ ಮೌಲ್ಯದ ಕಬ್ಬು ಬೆಳೆ ಬೆಂಕಿಗಾಹುತಿಯಾಗಿದ್ದು, ಅನ್ನದಾತನ ಆಕ್ರಂದನ ಮುಗಿಲು ಮುಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

