Breaking News

ಭದ್ರತಾ ಲೋಪ : ಸುಪ್ರೀಂ ಕೋರ್ಟ್‌ ಗೆ ಅರ್ಜಿ ಸಲ್ಲಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪಂಜಾಬ್‌ಗೆ ಬುಧವಾರ ಭೇಟಿ ಕೊಟ್ಟಾಗ ಉಂಟಾದ ಭದ್ರತಾ ಲೋಪದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಶುಕ್ರವಾರ ವಿಚಾರಣೆಗೆ ಎತ್ತಿಕೊಳ್ಳಲಿದೆ.

ಭವಿಷ್ಯದಲ್ಲಿ ಇಂತಹ ಭದ್ರತಾ ಲೋಪ ಸಂಭವಿಸದಂತೆ ಖಾತರಿಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಧಾನಿಯವರ ವಾಹನ ಸಾಲು ಭಟಿಂಡಾದಲ್ಲಿ ಸ್ವಲ್ಪ ಹೊತ್ತು ಸ್ಥಗಿತವಾಗಿತ್ತು. ಪ್ರಧಾನಿಯವರು ರ್‍ಯಾಲಿಯೊಂದರಲ್ಲಿ ಭಾಗವಹಿಸಬೇಕಿತ್ತು. ಆದರೆ, ಭದ್ರತಾ ಲೋಪದ ಬಳಿಕ ಪ್ರಧಾನಿಯವರು ಕಾರ್ಯಕ್ರಮದಲ್ಲಿ ಭಾಗವಹಿಸದೆಯೇ ಹಿಂದಿರುಗಿದ್ದರು.

‘ಅರ್ಜಿಯ ಪ್ರತಿಯನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡಿ. ನಾಳೆ (ಶುಕ್ರವಾರ) ಮೊದಲನೆಯದಾಗಿ ಈ ಅರ್ಜಿಯ ವಿಚಾರಣೆ ನಡೆಸಲಾಗುವುದು’ ಎಂದು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ರಮಣ ನೇತೃತ್ವದ ಪೀಠವು ಹೇಳಿದೆ.

Share News

About admin

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *