Breaking News

ವೇಗವಾಗಿ ಹರಡುತ್ತಿದೆ ಒಮಿಕ್ರಾನ್ ಸೋಂಕು : ಸುಧಾಕರ್


ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ಒಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿದ್ದು, ರಾಜ್ಯದ 5 ಜಿಲ್ಲೆಗಳಿಗೆ ಕಂಟಕವಾಗಲಿದೆ,ಕೊರೊನಾ 3 ನೇ ಅಲೆಯಲ್ಲಿ ಒಮಿಕ್ರಾನ್ ವೇಗವಾಗಿ ಹರಡುತ್ತಿದೆ. 2 ಡೋಸ್ ಲಸಿಕೆ ಪಡೆಯದವರ ಮೇಲೆ ಹೆಚ್ಚಿನ ಪರಿಣಾಮ ಬೀರಲಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರ, ಮೈಸೂರು, ಮಂಡ್ಯ, ಉಡುಪಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿದೆ.

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಇನ್ನೂ ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕೂಡ ಮಾಹಿತಿ ನೀಡಿದೆ.ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಎರಡು ಡೋಸ್ ಲಸಿಕೆ ಪಡೆದರೆ ಸಾವು ನೋವು ತಪ್ಪಿಸಬಹುದು ಎಂದು ಹೇಳಿದ್ದಾರೆ.

Share News

About admin

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *