Breaking News

ಎಕ್ಸಾಂ ಹಾಲ್‍ನಲ್ಲಿ ಮೊಬೈಲ್ ಬಳಸಿದ್ದ ಇಬ್ಬರು ಶಿಕ್ಷಕರ ಅಮಾನತು

ಭುವನೇಶ್ವರ: ಒಡಿಶಾದ ಜಾಜ್‍ಪುರ ಜಿಲ್ಲೆಯಲ್ಲಿ ನಡೆಯುತ್ತಿದ್ದ ಹತ್ತನೇ ತರಗತಿ ಪರೀಕ್ಷೆ ವೇಳೆ ಕೊಠಡಿಯಲ್ಲಿ ಮೊಬೈಲ್ ಫೋನ್ ಬಳಸುತ್ತಿದ್ದ ಇಬ್ಬರು ಇನ್‌ವಿಜಿಲೇಟರ್‌ಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುವಾರ ಎರಡು ವಿಭಿನ್ನ ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇಬ್ಬರು ಶಿಕ್ಷಕರು ಮೊಬೈಲ್ ಬಳಸುತ್ತಿರುವುದನ್ನು ತಪಾಸಣೆ ವೇಳೆ ಗಮನಿಸಿದ ಜಿಲ್ಲಾ ಶಿಕ್ಷಣಾಧಿಕಾರಿ ರಂಜನ್ ಗಿರಿ ತಕ್ಷಣ ಇಬ್ಬರನ್ನು ಅಮಾನತುಗೊಳಿಸಿದ್ದಾರೆ.

ಎರಡು ಪರೀಕ್ಷಾ ಕೇಂದ್ರಗಳ ಅಧೀಕ್ಷಕರು ಮತ್ತು ಉಪ ಅಧೀಕ್ಷಕರಿಗೆ ಶೋಕಾಸ್ ನೋಟಿಸ್ ನೀಡಲಾಗಿದ್ದು, ಕೇಂದ್ರದ ಅಧೀಕ್ಷಕರನ್ನು ಹೊರತುಪಡಿಸಿ ಯಾರೂ ಸೆಲ್ ಫೋನ್‍ಗಳನ್ನು ಪರೀಕ್ಷಾ ಹಾಲ್‍ಗೆ ಒಯ್ಯುವಂತಿಲ್ಲ ಎಂದು ಸೂಚಿಸಿದ್ದಾರೆ.

ಪ್ರೌಢ ಶಿಕ್ಷಣ ಮಂಡಳಿಯು ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೊದಲ ಸೆಮಿಸ್ಟರ್ ಪರೀಕ್ಷೆಯನ್ನು ನಡೆಸುತ್ತಿದ್ದು, ಪರೀಕ್ಷೆಗಳು ಬುಧವಾರ ಆರಂಭಗೊಂಡಿವೆ. 

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *