Breaking News

ಪಂಜಾಬ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟನೆ

ಹುಬ್ಬಳ್ಳಿ,: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಪಂಜಾಬ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಲ್ಲಿನ ಕಾಂಗ್ರೆಸ್ ಸರ್ಕಾರದ ಭದ್ರತಾ ವೈಫಲ್ಯ ಖಂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಹುಬ್ಬಳ್ಳಿಯ ಇಎಸ್‍ಐ ಆಸ್ಪತ್ರೆಯಿಂದ ಕಾರವಾರ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿವರೆಗೆ ಮೆರವಣಿಗೆ ನಡೆಸಿ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ಅವರ ಭಾವ ಚಿತ್ರವನ್ನು ದಹನಮಾಡಿ ಆಕ್ರೋಶ ವ್ಯಕ್ತ ಪಡಿಸಲಾಯಿತು.
ಪ್ರತಿಭಟನೆಯಲ್ಲ್ಲಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಪ್ರಕಾಶ ಶೃಂಗೇರಿ, ಪ್ರಮುಖರಾದ ಪ್ರಭು ನವಲಗುಂದ ಮಠ, ದತ್ತಾಮೂರ್ತಿ ಕುಲಕರ್ಣಿ ಸೇರಿದಂತೆ ಪಾಲ್ಗೋಂಡಿದ್ದರು.

ಕೊರೊನಾ ನಿಯಮ ಉಲ್ಲಂಘನೆ
ರಾಜ್ಯಸರ್ಕಾರದಿಂದ ಕೊರೊನಾ ಮಾರ್ಗಸೂಚಿ ಹೊರಡಿಸಿದ್ದರೂ ಸಹ ಇದ್ಯಾವುದೇ ಅನ್ವಯಿಸುವುದಿಲ್ಲ ಎಂಬತೆ ನಿಯಮವನ್ನು ಗಾಳಿಗೆ ತೂರಿ ಕೆಲವರು ಮಾಸ್ಕ್ ಧರಿಸದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಪ್ರತಿಭಟನೆ ನಡೆಸಲಾಯಿತು.

Share News

About admin

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *