ಹುಬ್ಬಳ್ಳಿ : ರಾಜ್ಯದಲ್ಲಿ ಇಂದಿನಿಂದ ಜಾರಿಯಾಗಿರುವ ವಿಕೇಂಡ್ ಕರ್ಪ್ಯೂಗೆ ಕೌಂಟಡೌನ್ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಹು-ಧಾ ಪೋಲಿಸ್ ಆಯುಕ್ತ ಲಾಭೂರಾಮ್ ಪೋಲಿಸ್ ಬಂದೊಬಸ್ತ್ ಹಾಗೂ ಅನಗತ್ಯ ಓಡಾಡುವವ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದರು.

ಜನರು ಕೋವಿಡ್ ನಿಯಮಗಳನ್ನು ಪಾಲಿಸಬೇಕು,ಅನಗತ್ಯ ಓಡಾಟ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹು-ಧಾ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ತಪಾಸಣೆ ಮಾಡಲಾಗುವುದು ಎಂದರು. ಎಪಿಎಂಸಿಯಲ್ಲಿ ನಾಳೆ ನಾಡಿದ್ದು ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪರ ಮಾಡಬೇಕೆಂದು ಮನವಿ ಮಾಡಿದರು.ಹೆಚ್ಚಿನ ಸಂಖ್ಯೆಯಲ್ಲಿ ಪೋಲಿಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುವುದು ನಿಯಮಗಳನ್ನು ಪಾಲಿಸುವ ಕುರಿತು ಎಪಿಎಂಸಿ ಅಧಿಕಾರಿಗಳ ಜೊತೆ ಮಾತುಕತೆ ಮಾಡಲಿದ್ದೇವೆ ಎಂದರು.ಅನಗತ್ಯ ಓಡಾಟ ಮಾಡುವ ವಾಹನಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಜನರ ಪೋಲಿಸ್ ಇಲಾಖೆಯೊಂದಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

