Breaking News

ಫ್ರಂಟ್ ಲೈನ್ ವರ್ಕರ್ ಗಳಿಗೆ ಬೂಸ್ಟರ್ ಡೋಸ್

ಜನವರಿ 10 ರಿಂದ 60 ವರ್ಷ ಮೇಲ್ಪಟ್ಟ ಅಗತ್ಯ ಇರುವವರಿಗೆ, ಫ್ರಂಟ್ ಲೈನ್ ವರ್ಕರ್ ಗಳಿಗೆ ಬೂಸ್ಟರ್ ಡೋಸ್ ನೀಡಲಾಗುವುದು. 15-18 ವರ್ಷಗಳ ಮಕ್ಕಳ ಲಸಿಕಾ ಕಾರ್ಯಕ್ರಮವೂ ವೇಗವಾಗಿ ನಡೆಯುತ್ತಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್‌ ಹೇಳಿದರು.

ವಿಧಾನಸೌಧದಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಭಾರತ 150 ಕೋಟಿ ಡೋಸ್ ಲಸಿಕೆ ನೀಡಿ ಮೈಲುಗಲ್ಲು ಸ್ಥಾಪಿಸಿದೆ. ಕೊರೊನಾ ವಿರುದ್ಧ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹೇಗೆ ಕೆಲಸ ಮಾಡುತ್ತಿವೆ ಅನ್ನುವುದಕ್ಕೆ ಇದು ಉದಾಹರಣೆ. ರಾಜ್ಯದಲ್ಲಿ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈಗಾಗಲೇ 99% ಮೊದಲ ಡೋಸ್ ಲಸಿಕೆ ನೀಡಲಾಗಿದೆ. ಎರಡನೇ ಡೋಸ್ ಪಡೆದವರ ಪ್ರಮಾಣ 80% ಇದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *