Breaking News

ನೀರಾವರಿ ಯೋಜನೆ ಅರಿವು ಮೂಡಿಸಲು ‘ಜನತಾ- ಜಲಧಾರೆ’ ಯಾತ್ರೆ


ಬೆಂಗಳೂರು: ‘2022 ಜೆಡಿಎಸ್​​ನ ಸಂಘಟನಾ ವರ್ಷ’ ಎಂದು ಘೋಷಿಸಿರುವ ಜೆಡಿಎಸ್‍, ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ‘ಜನತಾ- ಜಲಧಾರೆ’ ಯಾತ್ರೆಯನ್ನು 180 ಕ್ಷೇತ್ರಗಳಲ್ಲಿ ಹಮ್ಮಿಕೊಳ್ಳಲು ನಿರ್ಧರಿಸಿದೆ.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಧ್ಯಮಗಳ ಮುಂದೆ ಅನಾವರಣಗೊಳಿಸಿದರು.

ನಂತರ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಹೆಚ್​​​ಡಿಕೆ, ಜಲಧಾರೆ ಯಾತ್ರೆ ಮೂಲಕ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರ ಹಾಗೂ ಇತರ ರಾಜ್ಯಗಳು ಮಾಡಿದ ಅನ್ಯಾಯ ಹಾಗೂ ಕಿರುಕುಳದ ಬಗ್ಗೆ ರಾಜ್ಯದ ಜನರಿಗೆ ತಿಳಿಸಲಾಗುವುದು ಎಂದು ಹೇಳಿದರು.

Share News

About admin

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *