ಬೆಂಗಳೂರು : 28 ವಿಧಾನಸಭಾ ಕ್ಷೇತ್ರವಿದ್ದು, ಈ ಎಲ್ಲ ಕ್ಷೇತ್ರಗಳು ಅಭಿವೃದ್ಧಿ ಆದರೆ ಮಾತ್ರ ಬೆಂಗಳೂರು ಅಭಿವೃದ್ಧಿಯಾದಂತೆ. ಎಲ್ಲಾ ಕ್ಷೇತ್ರಗಳಿಗೆ ಅನುದಾನ ನೀಡಬೇಕು. ಬಿಜೆಪಿ ಅನುದಾನ ನೀಡುವ ವಿಚಾರದಲ್ಲಿ ತಾರತಮ್ಯ ಮಾಡುತ್ತಿದೆ.
ಬಿಜೆಪಿ ಶಾಸಕರಿರುವ ಕ್ಷೇತ್ರಗಳಿಗೆ ಮಾತ್ರ ಅನುದಾನ ಬಿಡುಗಡೆ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಮಲಿಂಗಾ ರೆಡ್ಡಿ ಅವರು, ‘ಬೆಂಗಳೂರಿನಲ್ಲಿ ಕೇವಲ 1 ತಾಸಿನಲ್ಲಿ 90 ಮಿ.ಮೀಟರ್ ಮಳೆಯಾದರೆ ಸುಮಾರು 100 ಕಡೆಗಳಲ್ಲಿ ಪ್ರವಾಹವಾಗುತ್ತದೆ. ಅದು ಪ್ರಕೃತಿ ವಿಕೋಪ. ಅದನ್ನು ತಡೆಯಲು ಸಾಧ್ಯವಿಲ್ಲ, ಆದರೆ ನಂತರ ಸರ್ಕಾರ ಹೇಗೆ ನಡೆದುಕೊಳ್ಳಲಿದೆ ಎಂಬುದು ಮುಖ್ಯ. ಇತ್ತೀಚೆಗೆ ಅತಿಯಾದ ಮಳೆ ಬಿದ್ದಾಗ ಮುಖ್ಯಮಂತ್ರಿಗಳು 1500 ಕೋಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

