ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಉತ್ತರ ಪ್ರದೇಶ, ಪಂಜಾಬ್, ಗೋವಾ, ಮಣಿಪುರ ಮತ್ತು ಉತ್ತರಾಖಂಡದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಶನಿವಾರ (ಜ.8) ಮಧ್ಯಾಹ್ನ 3.30ಕ್ಕೆ ಪ್ರಕಟಿಸಲಿದೆ ಎಂದು ಕೇಂದ್ರ ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿಯೇ ಕೇಂದ್ರ ಚುನಾವಣಾ ಆಯೋಗ 5 ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

