Breaking News

ಅಣ್ಣಾಮಲೈ ಚುನಾಯಿತ ಪ್ರತಿನಿಧಿಯಲ್ಲ



ಬೆಂಗಳೂರು : ಅಣ್ಣಾಮಲೈ ಚುನಾಯಿತ ಪ್ರತಿನಿಧಿಯಲ್ಲ, ಅವರು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಮಾತ್ರ. ಸರಕಾರದ ಭಾಗವಲ್ಲ. ತಮಿಳುನಾಡಿನಲ್ಲಿ ಸರಕಾರದ ಭಾಗವಾಗಿರುವುದು ಕಾಂಗ್ರೆಸ್ ಎಂಬುದು ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ರಾಜಕೀಯ ಕಾರಣಕ್ಕಾಗಿ ಈ ಆರೋಪ ಮಾಡುತ್ತಿದ್ದಾರೆ. ಕರ್ನಾಟಕಕ್ಕೆ ಹಂಚಿಕೆಯಾದ ನೀರಿನ ಬಗ್ಗೆ ವಿವಾದ ತೆಗೆಯಬೇಡಿ ಎಂದು ತಮಿಳುನಾಡು ಕಾಂಗ್ರೆಸ್ ಶಾಸಕರಿಗೆ ಮೊದಲು ಬುದ್ಧಿ ಹೇಳಿ ಎಂದು ಟೀಕಿಸಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *