ಕೋಲಾರ:ಕೊರೋನಾ ದಿನ ದಿನದಿಂದಕ್ಕೆ ಏರಿಕೆ ಕಾಣುತ್ತಿದ್ದುದು ಇದೀಗ ವಿಕೆಂಡ್ ಲಾಕ್ ಮಾಡಲಾಗಿದ್ದು ಎಲ್ಲರಲೂ ಆತಂಕ ಮನೆ ಮಾಡಿದೆ. ಇದೀಗ ವೀಕೆಂಡ್ ಕರ್ಫ್ಯೂ ಎರಡನೇ ದಿನ ಕ್ಕೆ ಕಾಲಿಟ್ಟುದ್ದು ನಗರದ ಜನರಿಂದ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಸದಾ ಪ್ರಯಾಣಿಕರಿಂದ ತುಂಬಿರುತ್ತಿದ್ದ . ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶ ಸೇರಿದಂತೆ ಜಿಲ್ಲೆಯಾದ್ಯಂತ ಜನರು ಮನೆಗಳಲ್ಲೇ ಉಳಿದು ಕರ್ಫ್ಯೂಗೆ ಬೆಂಬಲ ಸೂಚಿಸಿದರು.
ಹಾಲು, ತರಕಾರಿ, ಔಷಧ ಸೇರಿದಂತೆ ಅಗತ್ಯ ವಸ್ತುಗಳ ಮಳಿಗೆಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಅಂಗಡಿಗಳನ್ನು ಪೊಲೀಸರು ಬಂದ್ ಮಾಡಿಸಿದರು.
ಕೆಲವೆಡೆ ವರ್ತಕರು ಸ್ವಇಚ್ಛೆಯಿಂದ ಅಂಗಡಿಗಳನ್ನು ಮುಚ್ಚಿ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದರು. ಲಾಕ್‌ಡೌನ್ ಹಿನ್ನೆಲೆಯಲ್ಲಿ ಮುಂಚಿತವಾಗಿ ಶುಕ್ರವಾರವೇ ದಿನಸಿ, ತರಕಾರಿ ಸೇರಿದಂತೆ ದಿನಬಳಕೆ ವಸ್ತುಗಳನ್ನು ಖರೀದಿಸಿದ್ದ ಸಾರ್ವಜನಿಕರು ಹೆಚ್ಚಾಗಿ ಅಂಗಡಿಗಳತ್ತ ಮುಖ ಮಾಡಲಿಲ್ಲ.
bigtvnews | Hubli Dharwad News | Kannada News | Karnataka News Hubli News | News In Hubli | Local news

