ಸಂಗಮ: ಮೇಕೆದಾಟು ಯೋಜನೆಯ ಶ್ರೇಯಸ್ಸು ಕಾಂಗ್ರೆಸ್‌ಗೆ ಹೋಗಬಾರದು ಎಂಬ ಕಾರಣಕ್ಕೆ ಪಾದಯಾತ್ರೆ ತಡೆಯಲು ಬಿಜೆಪಿ, ಜೆಡಿಎಸ್ ಪ್ರಯತ್ನಿಸುತ್ತಿವೆ. ಎಷ್ಟೇ ಅಡ್ಡಿ ಉಂಟಾದರೂ ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸಬೇಡಿ ಎಂದು ರಾಜ್ಯಸಭೆ ವಿರೋಧಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕರೆ ನೀಡಿದರು.
ಪಾದಯಾತ್ರೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೋಜನೆಯಿಂದ ಬೆಂಗಳೂರಿಗೆ ಹಾಗೂ ಸುಮಾರು ಹಳ್ಳಿಗಳಿಗೆ 62 ಟಿಎಂಸಿ ಕುಡಿಯುವ ನೀರು ಸಿಗುತ್ತದೆ. ಜತೆಗೆ 400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡಬಹುದು. ಜತೆಗೆ ತಮಿಳುನಾಡಿನ ಪಾಲಿನ ನೀರನ್ನು ಎಲ್ಲಾ ಕಾಲದಲ್ಲೂ ಬಿಡಲು ಸಹ ನೆರವಾಗುತ್ತದೆ. ಇಂತಹ ಉತ್ತಮ ಯೋಜನೆಗೆ ಸಿದ್ದರಾಮಯ್ಯ ಸರ್ಕಾರದಲ್ಲಿ ಎಂ.ಬಿ. ಪಾಟಿಲ್ ರೂಪ ಕೊಟ್ಟಿದ್ದರು. ಡಿ.ಕೆ. ಶಿವಕುಮಾರ್ ಅವರು ಜಲ ಸಂಪನ್ಮೂಲ ಸಚಿವರಾದಾಗ ಪರಿಷ್ಕೃತ ಡಿಪಿಆರ್‌ನ್ನು ಕೇಂದ್ರಕ್ಕೆ ಕಳುಹಿಸಿದ್ದಾರೆ. ಈ ಯೋಜನೆ ಜಾರಿಯಾದರೆ ಬೆಂಗಳೂರಿನ ನೀರಿನ ಸಮಸ್ಯೆ ನೀಗುತ್ತದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

