Breaking News

ಕಾಗ್ರೆಂಸ್ ನಾಯಕರು ವಿರುದ್ಧ FIR ದಾಖಲು

ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ 30 ಜನ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಈ ಕುರಿತು ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ನಿಯಮ ಉಲ್ಲಂಘಿಸಿದ ಎಲ್ಲರ ಮೇಲೂ ಕೇಸ್ ದಾಖಲಿಸಲಾಗಿದೆ. ಪಾದಯಾತ್ರೆ ಚಾಲನೆ ನೀಡಲು ವೇದಿಕೆ ಮೇಲೆ ಇದ್ದ ಎಲ್ಲಾ ನಾಯಕರ ವಿರುದ್ಧವೂ ಪ್ರಕರಣ ದಾಖಲಾಗಿದೆ ಎಂದರು.

ಈ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ಐಪಿಸಿ ಸೆಕ್ಷನ್ 141, 143, 290, 336 ಅಡಿ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *