ಬೆಂಗಳೂರು: ಕೊರೊನಾ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿತ್ತು. ನಿನ್ನೆ ಕರ್ಫ್ಯೂ ಇದ್ದರೂ ಕೂಡ ನಿಯಮ ಉಲ್ಲಂಘನೆ ಮಾಡಿ ಕಾಂಗ್ರೆಸ್ ನಾಯಕರು ಮೇಕೆದಾಟು ಪಾದಯಾತ್ರೆಗೆ ಚಾಲನೆ ನೀಡಿದ್ದರು. ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿ ಪಾದಯಾತ್ರೆಗೆ ಚಾಲನೆ ನೀಡಿದರು. ಮೇಕೆದಾಟು ಪಾದಯಾತ್ರೆಯಲ್ಲಿ ಭಾಗವಹಿಸಿರುವವರು ಸಾವಿರಾರು ಜನ. ಆದರೆ ಬರೀ ಮೂವತ್ತು ಜನರ ಮೇಲಷ್ಟೇ ಏಕೆ ಎಫ್.ಐ.ಆರ್. ಹಾಕಿದ್ದೀರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.
ಪಾದಯಾತ್ರೆ ವೇಳೆ ವಾರಾಂತ್ಯ ಕರ್ಫ್ಯೂ ಮಾರ್ಗಸೂಚಿ ಉಲ್ಲಂಘಿಸಿದ ಆರೋಪದಲ್ಲಿ ಮಾಜಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹಿತ 30 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಮಾತನಾಡಿದ ಅವರು, ಸಾವಿರಾರು ಜನ ಪಾದಯಾತ್ರೆಯಲ್ಲಿ ಭಾಗವಹಿಸಿದರಲ್ಲ? ಅವರ ಮೇಲೆಲ್ಲ ಕೇಸು ಹಾಕಿ ಎಂದು ಸರಕಾರಕ್ಕೆ ಸವಾಲು ಹಾಕಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

