ಬೆಂಗಳೂರು: ರಾಜ್ಯದಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ವಿತರಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಂದು ಶಿವಾಜಿನಗರದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಈ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
ಇದಕ್ಕಾಗಿ ಶುಕ್ರವಾರದಿಂದಲೇ ಕೋವಿನ್ ವೆಬ್ಸೈಟ್ನಲ್ಲಿ ನೋಂದಣಿ ಕೂಡಾ ಆರಂಭವಾಗಿದೆ. ಡಿಸೆಂಬರ್25 ರಂದು ದಿಢೀರ್ ಆಗಿ ದೇಶವನ್ನುದ್ದೇಶಿಸಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರು, 15-18 ವರ್ಷದ ಮಕ್ಕಳು ಹಾಗೂ ಕೋವಿಡ್ ಮುಂಚೂಣಿ ಕಾರ್ಯಕರ್ತರು ಹಾಗೂ ಹಿರಿಯ ನಾಗರಿಕರಿಗೆ ಪ್ರಿಕಾಷನ್ ಡೋಸ್ ನೀಡುವುದಾಗಿ ಘೋಷಣೆ ಮಾಡಿದ್ದರು. ಅದರಂತೆ ಇಂದಿನಿಂದ ಪ್ರಿಕಾಷನ್( ಬೂಸ್ಟರ್ ಡೋಸ್) ಲಸಿಕೆ ನೀಡಿಕೆಗೆ ಚಾಲನೆ ಸಿಗಲಿದೆ ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

