Breaking News

ಸಕಲ ಸರ್ಕಾರಿ ಗೌರವದೊಂದಿಗೆ ಚಂಪಾ ಅಂತ್ಯ ಕ್ರಿಯೆ



ಬೆಂಗಳೂರು: ಬೆಂಗಳೂರು: ಹಿರಿಯ ಸಾಹಿತಿ, ನಾಟಕಕಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಪ್ರೊ.ಚಂದ್ರಶೇಖರ ಪಾಟೀಲ (ಚಂಪಾ) 83 ವರ್ಷ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಅಲೇ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಾತನಾಡಿದ
ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದರು.

ಚಂಪಾ ಎಂದೇ ಪ್ರಸಿದ್ಧರಾದ ಇವರು ಇಂದು ನಮ್ಮನ್ನು ಅಗಲಿದ್ದಾರೆ. ಅವರ ಸ್ವತಂತ್ರ ಚಿಂತನೆಯ ಲೇಖನದಲ್ಲಿ ಮೊನಚು ಇರುತ್ತಿತ್ತು. ವಿಷಯವನ್ನು ಪ್ರತಿಪಾದಿಸುವ ರೀತಿ ಮತ್ತು ಪ್ರಸ್ತುತ ವಿಷಯಗಳ ಬಗ್ಗೆ ವಿಮರ್ಶಿಸಿ ವ್ಯವಸ್ಥೆಗೆ ಕನ್ನಡಿ ಹಿಡಿಯುವಂತಹ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದ ಚಂಪಾ ಅವರು ಅಖಿಲ ಭಾರತ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಚಂಪಾರವರು ತಮ್ಮ ಕುಟುಂಬಕ್ಕೆ ಅದರಲ್ಲಿಯೂ ತಮ್ಮ ತಂದೆಯವರಿಗೆ ಬಹಳ ಆತ್ಮೀಯರಾಗಿದ್ದರು.

ತಮಗೆ ಮಾರ್ಗದರ್ಶಕರಾಗಿದ್ದ ಚಂಪಾ ಅವರು ಇಂದು ನಮ್ಮನ್ನು ಅಗಲಿರುವುದು ಸಾಹಿತ್ಯ ಲೋಕಕ್ಕೆ ಬಹಳ ದೊಡ್ಡ ನಷ್ಟವಾಗಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *