Breaking News

ಮೇಕೆದಾಟು ಪಾದಯಾತ್ರೆ ನಿಲ್ಲಿಸಲು ಬಿಜೆಪಿ ಹೊಸ ಪ್ಲಾನ್ : ಸಿಎಂ ವಿರುದ್ಧ ಗುಡಿಗಿದ ಡಿಕೆಶಿ

ಬೆಂಗಳೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಂಡಿರುವ ಡಿ.ಕೆ. ಶಿವಕುಮಾರ್, ರಾಜ್ಯ ಸರ್ಕಾರ ಕಳುಹಿಸಿದ್ದ ಆರೋಗ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.  ಕೋವಿಡ್ ಟೆಸ್ಟ್ ನಿರಾಕರಿಸಿ, ಆರೋಗ್ಯಾಧಿಕಾರಿಗಳನ್ನು ವಾಪಸ್ ಕಳುಹಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳದೇ ಬಾಯಿಗೆ ಬಂದಂತೆ ಮಾತನಾಡಿರುವುದು ಡಿಕೆಶಿ ಕಲ್ಚರ್ ನ್ನು ತೋರಿಸುತ್ತದೆ ಎಂದಿದ್ದಾರೆ.

ಮತ್ತೆ ಮುಂದುವರೆದು ಮಾತನಾಡಿದ ಅವರು,
ನನ್ನನ್ನು ನೋಡಿದರೆ ಕೊರೊನಾ ಲಕ್ಷಣಗಳು ಇದೆ ಅನಿಸುತ್ತಿದೆಯೇ ? ನನಗೆ ಕೋವಿಡ್ ಟೆಸ್ಟು ಬೇಡಾ, ಯಾವ ಟೆಸ್ಟೂ ಬೇಡಾ, ನನಗೆ ಟೆಸ್ಟ್ ಮಾಡಿ ಪಾಸಿಟಿವ್ ಅಂತ ವರದಿ ಕೊಟ್ಟು ಪಾದಯಾತ್ರೆಯನ್ನು ಹತ್ತಿಕ್ಕುವ ಬಗ್ಗೆ ಬಿಜೆಪಿ ಪ್ಲಾನ್ ಮಾಡಿದೆ. ನನಗೆ ಕೋವಿಡ್ ಟೆಸ್ಟ್ ಮಾಡುವ ಬದಲು ಆರೋಗ್ಯ ಸಚಿವ ಸುಧಾಕರ್ ಗೆ ಟೆಸ್ಟ್ ಮಾಡಿ. ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಲ್ಲ ಎಂದು ಗುಡುಗಿದ್ದಾರೆ.

Share News

About admin

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *