Breaking News

ಪ್ರಧಾನಿ ಅವರಿಂದ ಜ.12ರಂದು 11 ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಉದ್ಘಾಟನೆ

ನವದೆಹಲಿ: ತಮಿಳುನಾಡಿನಾದ್ಯಂತ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಜನವರಿ 12) 11 ನೂತನ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಚೆನ್ನೈನಲ್ಲಿ ಶಾಸ್ತ್ರೀಯ ತಮಿಳು ಭಾಷಾ ಕೇಂದ್ರದ ನೂತನ ಕ್ಯಾಂಪಸ್ ಅನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಧಾನಮಂತ್ರಿ ಕಚೇರಿ ಬಿಡುಗಡೆಗೊಳಿಸಿದ ಪತ್ರಿಕಾ ಪ್ರಕಟಣೆ ಪ್ರಕಾರ, ಸುಮಾರು 4,000 ಕೋಟಿ ರೂಪಾಯಿ ಅಂದಾಜು ವೆಚ್ಚದ ನೂತನ ಮೆಡಿಕಲ್ ಕಾಲೇಜುಗಳನ್ನು ತಮಿಳುನಾಡಿನಲ್ಲಿ ಕಟ್ಟಲಾಗಿದೆ. ಇದರಲ್ಲಿ 2,145 ಕೋಟಿ ರೂಪಾಯಿ ಹಣ ಕೇಂದ್ರ ಸರ್ಕಾರದ್ದಾಗಿದ್ದು, ಉಳಿದ ಹಣ ತಮಿಳುನಾಡು ಸರ್ಕಾರದ್ದಾಗಿದೆ ಎಂದು ತಿಳಿಸಿದೆ.

ತಮಿಳುನಾಡಿನ ವಿರುಧುನಗರ್, ನಾಮಕ್ಕಲ್, ನೀಲಗಿರಿ, ತಿರುಪ್ಪುರ್, ತಿರುವಳ್ಳೂರ್, ನಾಗಪಟ್ಟಣಂ, ದಿಂಡಿಗಲ್, ಕಲ್ಲಕುರುಚಿ, ಅರಿಯಾಲೂರ್, ರಾಮನಾಥಪುರಂ ಮತ್ತು ಕೃಷ್ಣಗಿರಿ ಸೇರಿದಂತೆ 11 ನೂತನ ಮೆಡಿಕಲ್ ಕಾಲೇಜುಗಳು ನಿರ್ಮಾಣಗೊಂಡಿರುವುದಾಗಿ ವರದಿ ವಿವರಿಸಿದೆ.

Share News

About admin

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *