Breaking News

ಮುಂಚೂಣಿ ಸಿಬ್ಬಂದಿಗೆ ಬೂಸ್ಟರ್‌ ಡೋಸ್‌ ನೀಡಲಾಗುವುದು : ಮುನೇನಕೊಪ್ಪ


ಹುಬ್ಬಳ್ಳಿ: ‘ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುವ ವಿವಿಧ ಇಲಾಖೆ ಸಿಬ್ಬಂದಿಗೆ ಸೋಮವಾರದಿಂದ ನಗರದ ಕಾರವಾರ ರಸ್ತೆಯ ಹಳೇ ಸಶಸ್ತ್ರ ಮೀಸಲು ಪಡೆ ಮೈದಾನದಲ್ಲಿ ಬೂಸ್ಟರ್‌ ಡೋಸ್‌ ನೀಡಲಾಗುವುದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಹೇಳಿದರು.

ಮಹಾನಗರ ಪಾಲಿಕೆಯ ಆಯುಕ್ತರ ಭವನದಲ್ಲಿ ಭಾನುವಾರ ನಡೆದ ಕೋವಿಡ್‌-19 ಮೂರನೇ ಅಲೆಯ ನಿಯಂತ್ರಣ ಕುರಿತು ಚರ್ಚಿಸಲು ನಡೆದ ಸಭೆಯ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

‘ಮುಂಜಾಗ್ರತಾ ಕ್ರಮವಾಗಿ ಕಿಮ್ಸ್‌, ಜಿಲ್ಲಾಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 3,153 ಹಾಸಿಗೆಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ 1,374, ಖಾಸಗಿ ಆಸ್ಪತ್ರೆಗಳಲ್ಲಿ 878 ಆಮ್ಲಜನಕ ಸಹಿತ ಹಾಸಿಗೆಗಳನ್ನು ಹಾಗೂ 208 ವೆಂಟಿಲೇಟರ್‌ ಸಹಿತ ಹಾಸಿಗೆಗಳನ್ನು ಸಿದ್ಧಮಾಡಿಟ್ಟುಕೊಳ್ಳಲಾಗಿದೆ. ಮೂರನೇ ಅಲೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಿದ್ಧವಾಗಿದೆ’ ಎಂದರು.

Share News

About admin

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *