ಬೆಂಗಳೂರು: ದಿನೇದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಸ್ತುತ ನೈಟ್ ಕರ್ಫ್ಯೂ ಹಾಗೂ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 1 ರಿಂದ 10 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಫೆಬ್ರವರಿ 1 ರವರೆಗೂ ಕೊರೋನಾ ಏರುಗತಿಯಲ್ಲಿ ಸಾಗಿದರೆ, ಫೆ. 1 ರಿಂದ 10 ದಿನಗಳ ಕಾಲ ಮೊದಲ ಹಂತದಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡುವ ಸಾಧ್ಯತೆ ಇದೆ.
ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಹೆಚ್ಚಿನ ನಿರ್ಬಂಧ ವಿಧಿಸುವ ಬಗ್ಗೆ ಸುಳಿವು ನೀಡಿದ್ದಾರೆ. ಕೊರೋನಾ ಪ್ರಕರಣಗಳ ಸಂಖ್ಯೆಯನ್ನು ಆಧರಿಸಿ ನಿರ್ಬಂಧವನ್ನು ಸಡಿಲ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದೆನಾದರೂ, ಈಗ ಪರಿಸ್ಥಿತಿ ಮೊದಲಿನಂತಿಲ್ಲ. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು. ಹೆಚ್ಚಿನ ನಿರ್ಬಂಧಗಳನ್ನು ವಿಧಿಸಬೇಕಾದಂತಹ ಪರಿಸ್ಥಿತಿ ಇದೆ ಎಂದು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

