Breaking News

ಮತ್ತೆ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು, ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆ

ಬೆಂಗಳೂರು: ದಿನೇ ದಿನೇ ಹೆಚ್ಚಾಗುತ್ತಿರುವಂತ ಕೊರೋನಾ, ಓಮಿಕ್ರಾನ್ ಕೇಸ್ ಗಳಿಂದಾಗಿ 3ನೇ ಅಲೆ ಆರಂಭವಾಗಿದೆ. ರಾಜ್ಯ ಸರ್ಕಾರ ಜಾರಿಗೊಳಿಸಿರುವಂತ ವೀಕೆಂಡ್ ಕರ್ಪ್ಯೂ , ನೈಟ್ ಕರ್ಪ್ಯೂವನ್ನು ಲೆಕ್ಕಿಸದೇ ಕಾಂಗ್ರೆಸ್ ನಿಂದ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಹೆಚ್ಚಾದ್ರೆ.. ಮತ್ತೆ ಕಂಪ್ಲೀಟ್ ಲಾಕ್ ಡೌನ್  ಮಾಡಲಾಗುತ್ತದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಹೊಣೆಯಾಗಲಿದೆ ಎಂಬುದಾಗಿ ಗೃಹ ಸಚಿವ ಅರಗಜ್ಞಾನೇಂದ್ರ ಅವರು ಮುನ್ಸೂಚನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವಂತ ಅವರು, ಸೋಂಕು ಹೆಚ್ಚಳವಾದ್ರೆ ಮತ್ತೆ ಲಾಕ್ ಡೌನ್ ಮಾಡ್ಬೇಕಾಗುತ್ತೆ. ತಿಂಗಳುಗಟ್ಟಲೇ ಲಾಕ್ ಡೌನ್ ಮಾಡ್ಬೇಕಾಗುತ್ತೆ. ಮತ್ತೆ ಲಾಕ್ ಡೌನ್ ಆದ್ರೇ ಅದಕ್ಕೆ ಕಾಂಗ್ರೆಸ್ ಹೊಣೆಯಾಗಲಿದೆ. ಕೊರೋನಾ ನಿಯಮ ಉಲ್ಲಂಘಿಸಿ ಪಾದಯಾತ್ರೆ ನಡೆಸುತ್ತಿರುವಂತ ಕಾಂಗ್ರೆಸ್ ಮುಖಂಡರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಪೊಲೀಸರೇನು ಅಸಾಹಯಕರಲ್ಲ ಎಂದು ತಿಳಿಸಿದರು.

Share News

About admin

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *